ಬಿಜೆಪಿ ಸವಾಲಿಗೆ ಪ್ರೂಫ ಸಮೇತ ಉತ್ತರ ಕೊಟ್ಟ ಸಿದ್ದರಾಮಯ್ಯ
- Krishna Shinde
- 7 Jan 2024 , 9:49 AM
- Bengaluru
- 161
ಬೆಂಗಳೂರು : ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ ಟಿ ರವಿ ಸಿಎಂ ಸಿದ್ದರಾಮಯ್ಯರವರಿಗೆ ಸವಾಲು ಹಾಕಿದ್ದರು.

ಸವಾಲಿಗೆ ಪ್ರತ್ಯುತ್ತುರವಾಗಿ ಸಿಎಂ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಬಹಿರಂಗ ಪಡಿಸಿದ್ದಾರೆ ಮತ್ತು ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಗುಡುಗಿದ್ದಾರೆ.

ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು,ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.










