ರೂ.2000 ನೋಟು ನಿಷೇದ ಬೆನ್ನಲ್ಲೇ ಪ್ರಧಾನಿಯವರ ಮೇಲೆ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು :ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ  ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

promotions

ಈಗ ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ  ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದು ಗುಡುಗಿದ್ದಾರೆ.

promotions

Read More Articles