ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಸಿಎಂಗೆ ಟಾಂಗ ಕೊಟ್ಟ ಟಗರು
- 12 Jan 2024 , 8:42 PM
- Belagavi
- 207
ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಗಾ ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬೊಮ್ಮಾಯಿ ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ ಎಂದಿದ್ದಾರೆ.

ಸಾರ್ವಜನಿಕ ಸಭೆಗಳಲ್ಲಿ ವಿರೋಧ ಪಕ್ಷದ ವಿರುದ್ಧ ಅಬ್ಬರಿಸುತ್ತಿರುವ ನಿಮಗೆ, ನೀವು ಎರಡುವರೆ ಸಾವಿರ ಕೋಟಿ ದುಡ್ಡು ಕೊಟ್ಟು ಮುಖ್ಯಮಂತ್ರಿಯಾಗಿದ್ದೀರಿ ಎಂದು ಆರೋಪ ಮಾಡುತ್ತಿರುವ ನಿಮ್ಮದೇ ಪಕ್ಷದ ಒಬ್ಬ ಶಾಸಕನ ವಿರುದ್ಧ ಸೊಲ್ಲೆತ್ತುವ ಧೈರ್ಯ ಇಲ್ಲ. ಇದೆಂತಹ ನಿಮ್ಮ ಹೇಡಿತ ಎಂದು ಪ್ರಶ್ನೆ ಮಾಡಿದ್ದಾರೆ.
ನಿಮ್ಮ ಖಾಲಿ ಡಬ್ಬದ ಸದ್ದಿಗೆ ಹೆದರುವವರು ಯಾರೂ ಇಲ್ಲ. ನಿಮ್ಮ ಧಮ್ –ತಾಖತ್ ಗಳ ಮಾತುಗಳೆಲ್ಲವೂ ಸಾರ್ವಜನಿಕ ಸಭೆಗಳಿಗಷ್ಟೇ ಸೀಮಿತ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಬೇಕಾದರೆ ಮತ್ತೆ ನೀವು ಆರ್ ಎಸ್ ಎಸ್ ನಾಯಕರ ಮನೆಗೆ ತೆರಳಿ ಪಾದಪೂಜೆ ಮಾಡಲೇಬೇಕು .
ನಾಯಕರಾದ ರಾಹುಲ ಗಾಂಧಿ ಅವರನ್ನು ಪ್ರಧಾನಮಂತ್ರಿ ಸ್ಥಾನದಲ್ಲಿ ನೀವು ಕಾಣಬಯಸಿದರೆ ನಮ್ಮದೇನೂ ಅಭ್ಯಂತರ ಇಲ್ಲ. ಆದರೆ ನಮ್ಮ ನಾಯಕರು ಜನಮತದ ಬೆಂಬಲದಿಂದಲೇ ಪ್ರಧಾನಿಯಾಗುವವರು. ನಿಮ್ಮ ಹಾಗೆ ಆಪರೇಷನ್ ಕಮಲದ ಮೂಲಕ ಆ ಸ್ಥಾನಕ್ಕೆ ಏರುವವರಲ್ಲ ಎಂದು ಟಾಂಗ ಕೊಟ್ಟಿದ್ದಾರೆ.










