ಶ್ರೀ ಸಿದ್ದರಾಮೇಶ್ವರ ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಸಾಧನೆ

ಬೆಳಗಾವಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಜೋಡೋ ಸೈಕ್ಲಿಂಗ್ ಟೇಬಲ್ ಟೆನಿಸ್ ಹಾಗೂ ಅಥ್ಲೆಟಿಕ್ಸ್ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಪೂಜ್ಯಶ್ರೀ ಡಾಅಲ್ಲಮಪ್ರಭು ಮಹಾಸ್ವಾಮಿಗಳು ಶ್ರೀ ರುದ್ರಾಕ್ಷಿ ಮಠ ನಾಗನೂರು ಬೆಳಗಾವಿ ಇವರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಶಿಸಿದರು.
ರಾಜ್ಯಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದು ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತರುವಂತೆ ಆಶೀರ್ವದಿಸಿ ಪ್ರೋತ್ಸಾಹಿಸಿದರು ಸಹಾಯ ಮತ್ತು ಪ್ರೋತ್ಸಾಹವನ್ನು ನೀಡುತ್ತಿರುವ ಎಲ್ಲ ಸಿಬ್ಬಂದಿ ವರ್ಗಕ್ಕೂ ಹಾಗೂ ಪ್ರಾಚಾರ್ಯರಾದ  ಸಿದ್ದರಾಮಯ್ಯರೆಡ್ಡಿ ಹಾಗೂ ಕಾರ್ಯದರ್ಶಿಗಳಾದ  ಕೆಬಿ ಹಿರೇಮಠ್ ಮತ್ತು ದೈಹಿಕ ಶಿಕ್ಷಣದ ಉಪನ್ಯಾಸಕರಾದ ಪ್ರಭು ಶಿವ ನಾಯಕರ್ ಇವರು ವಿದ್ಯಾರ್ಥಿಗಳ ಸಾಧನೆಗೆ ಶ್ರಮಿಸುತ್ತಿದ್ದಾರೆ.

promotions

promotions

Read More Articles