ಆರೋಗ್ಯ ವೃದ್ಧಿಗೆ ಕ್ರೀಡೆ ಪೂರಕ ಔಷಧ : ವಿಠ್ಠಲ ಜಾಬಗೌಡರ
- shivaraj B
- 20 Jul 2024 , 5:54 PM
- Koppal
- 4799
ಕೊಪ್ಪಳ : ದೈಹಿಕ ಸಧೃಢತೆಗಾಗಿ ಪ್ರತಿಯೊಬ್ಬರು ಕ್ರೀಡಾಸಕ್ತಿ ಬೆಳಸಿಕೊಳ್ಳಬೇಕು ಮನುಷ್ಯನ ಆರೋಗ್ಯ ವೃದ್ಧಿಗೆ ಕ್ರೀಡೆ ಮದ್ದು, ಅದೊಂದು ಪೂರಕ ಔಷಧ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ಹೇಳಿದರು.
ಅವರು ಶನಿವಾರದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಕಾರ್ಯನಿತರ ಪತ್ರಕರ್ತರ ಸಂಘ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧೆಯಲ್ಲಿ ಪಾಲ್ಗೊಳವುದು ಬಹಳ ಮುಖ್ಯ ಎಂದ ಅವರು ಪತ್ರಕರ್ತರು ದಿನದ ಎಲ್ಲಾ ಸಮಯ ಕಾರ್ಯದಲ್ಲಿ ಮಗ್ನರಾಗಿರುತ್ತೀರಿ ಎಂದ ಅವರು ಸ್ವಲ್ಪ ಸಮಯ ಕ್ರೀಡೆಗೆ ಮೀಸಲು ಇಡಬೇಕು ಎಂದು ಹೇಳಿದರು.
ಜಿಲ್ಲಾ ಕ್ರೀಡಾಂಗಣ ಇನ್ನಷ್ಟು ಅಭಿವೃದ್ಧಿ ಪಡಿಸಲು ಪತ್ರಕರ್ತರ ಸಹಕಾರ ಅಗತ್ಯ ಎಂದರು.
ಮುಖ್ಯ ಅಥಿತಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ ಮಾತನಾಡಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಕ್ರೀಡೆ ಸಹಾಕಾರಿಯಾಗಿದೆ ಎಂದರು.
ನಿರ್ಣಾಯಕರಾಗಿ ದೈಹಿಕ ಶಿಕ್ಷಕರಾದ ಬಸವರಾಜ ಹನುಮಸಾಗರ ಮತ್ತು ಶರಣಬಸವ ಸ್ವಾಮಿ ಆಗಮಿಸಿದ್ದರು. ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ತಿಪ್ಪಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಎಂ. ಸಾದಿಕ ಅಲಿ ಪ್ರಸ್ತಾವಿಕವಾಗಿ ಮಾತನಾಡಿದರು. ನಾಮನಿರ್ದೇಶನ ರಾಜ್ಯ ಸಮಿತಿ ಸದಸ್ಯ ಹರೀಶ್ ಹೆಚ್. ಎಸ್., ರಾಷ್ಟ್ರೀಯ ಸದಸ್ಯ ಜಿ.ಎಸ್. ಗೋನಾಳ, ಜಿಲ್ಲಾ ಉಪಾಧ್ಯಕ್ಷ ಹನುಮಂತ ಹಳ್ಳಿಕೇರಿ, ಕ್ರೀಡಾ ಸಮಿತಿ ಮುಖ್ಯಸ್ಥ ಬಿ.ಆರ್.ರಾಜು ಇದ್ದರು. ಕಟ್ಟಡ ಸಮಿತಿ ಅಧ್ಯಕ್ಷ ಎನ್.ಎಂ. ದೊಡ್ಡಮನಿ ಸ್ವಾಗತಿಸಿ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ. ನಾಗರಾಜ ವಂದಿಸಿದರು.
ಮಂಜುನಾಥ ಜಿ. ಗೊಂಡಬಾಳ ಪ್ರಾರ್ಥನೆ ಮಾಡಿದರು. ಬಾಹುಬಲಿ ಮತ್ತು ಚಕ್ರವರ್ತಿ ತಂಡಗಳ ಮಧ್ಯ ಕ್ರಿಕೆಟ್ ಪಂದ್ಯ ಜರುಗಿತು. ಚಕ್ರವರ್ತಿ ತಂಡ ಜಯಶಾಲಿಯಾಯಿತು. ನಂತರ ವಿವಿದ ಕ್ರೀಡೆಗಳು ಜರುಗಿದವು. ಮಂಜುನಾಥ ಗೊಂಡಬಾಳ ನೂರು ಮೀಟರ್ ಓಟದಲ್ಲಿ ಮೊದಲ ಸ್ಥಾನ, 200 ಮೀಟರ್ ಓಟದಲ್ಲಿ ದ್ವಿತಿಯ ಮತ್ತು ಮಂಜುನಾಥ ಗೊಂಡಬಾಳ ಹಾಗೂ ಆಂಜನೇಯ ಡಬಲ್ಸ್ ಶಟಲ್ ನಲ್ಲಿ ತೃತೀಯ ಸ್ಥಾನ ಪಡೆದರು.
ವರದಿ : ರವಿಚಂದ್ರ ಬಿ ಬಡಿಗೇರ್