NEP ಪಠ್ಯಕ್ರಮ, ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ : ಕಳೆದ 8 ತಿಂಗಳಿಂದ ಪದವಿ ಪಲಿತಾಂಶ ಪ್ರಕಟಿಸದ ವಿಶ್ವವಿದ್ಯಾಲಯಗಳ ವಿರುದ್ಧ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ವತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

promotions

ಇಂದು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಹಾಗೂ ಪದವಿ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗಿದ್ದು, ಬೆಳಗಾವಿಯಲ್ಲೂ ಕೂಡಾ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು‌.

promotions

NEP ಪಠ್ಯಕ್ರಮ, ವಿದ್ಯಾರ್ಥಿ ವೇತನ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ, 200 ಕ್ಕೂ ಅಧಿಕ ಅಧಿಕ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು‌.

Read More Articles