ಭೀಕರ ಅಪಘಾತ ಆರು ಜನರ ಸಾವು: ಸಚಿವ ಕಾರಜೋಳ ಸಂತಾಪ
- 14 Jan 2024 , 3:38 PM
- Belagavi
- 140
ಬೆಳಗಾವಿ: ಬುಧವಾರ ತಡರಾತ್ರಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ಭಕ್ತರ ವಾಹನದ ರಾಮದುರ್ಗ ತಾಲೂಕಿನ ಚಿಂಚನೂರು ವಿಠ್ಠಲ್ ದೇವಸ್ಥಾನದ ಬಳಿ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟ ಘಟನೆ ನಡೆದಿದೆ.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರು ಮಹೇಂದ್ರ ಗೂಡ್ಸ್ ವಾಹನದಲ್ಲಿ ಹೊರಟ್ಟಿದ್ದ ಭಕ್ತರು ಚಾಲಕನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ರಭಸಕ್ಕೆ ಗುದ್ದಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಅಪಘಾತದಲ್ಲಿ ಮೃತಪಟ್ಟವರು ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನಮವ್ವ ಮ್ಯಾಗಾಡಿ (25),ದೀಪಾ (31),ಸವಿತಾ (17),ಸುಪ್ರೀತಾ ( 11),ಮಾರುತಿ (42),ಇಂದ್ರವ್ವ (24) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ರಾಮದುರ್ಗ ತಾಲ್ಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ.
ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಮಹೇಂದ್ರ ಗೂಡ್ಸ್ ವಾಹನವು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಹುಲಕುಂದ ಗ್ರಾಮದ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುತ್ತಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಹದಿನಾರು ಜನರಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.
ಉಸ್ತುವಾರಿ ಸಚಿವರ ಸಾಂತ್ವನ:
ಅಪಘಾತದಲ್ಲಿ ಮೃತಪಟ್ಟಿರುವವರ ಆತ್ಮಕ್ಕೆ ಭಗವಂತ ಚಿರಶಾಂತಿ ದಯಪಾಲಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ. ಮೃತರ ಕುಟುಂಬದ ದುಃಖದಲ್ಲಿ ತಾವೂ ಭಾಗಿಯಾಗಿದ್ದೇನೆ ಎಂದು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ. ಗಾಯಾಳುಗಳು ಆದಷ್ಟು ಬೇಗನೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.










