#ನನ್ನತೆರಿಗೆನನ್ನಹಕ್ಕು ಅಭಿಯಾನಕ್ಕೆ ಸಾಥ ಕೊಟ್ಟ ಸಿಎಂ

ಬೆಂಗಳೂರು:ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ #ನನ್ನತೆರಿಗೆನನ್ನಹಕ್ಕು ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

promotions

"ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್," ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

promotions

"ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. 
ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ," ಎಂದು ಅವರು ಹೇಳಿದ್ದಾರೆ.

#ನನ್ನತೆರಿಗೆನನ್ನಹಕ್ಕು ಅಭಿಯಾನ:

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಕನ್ನಡಿಗರು #ನನ್ನತೆರಿಗೆನನ್ನಹಕ್ಕು ಅಭಿಯಾನವನ್ನು ಆರಂಭಿಸಿದ್ದಾರೆ. ಈ ಅಭಿಯಾನದ ಮೂಲಕ ಕನ್ನಡಿಗರು ತಮ್ಮ ತೆರಿಗೆ ಹಣ ಉತ್ತರ ಭಾರತದ ರಾಜ್ಯಗಳ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬೆಂಬಲದಿಂದ ಈ ಅಭಿಯಾನಕ್ಕೆ ಮತ್ತಷ್ಟು ಒತ್ತು ಸಿಕ್ಕಿದೆ ಎಂದು ಕಾಣಬಹುದು.

Read More Articles