ಪ್ರತಿಭಟನೆಯಿಂದ ಹಿಂದೆಸರಿದಿದ್ದಾರೆ ಎಂಬ ಸುದ್ದಿ ಸುಳ್ಳು : ಖಚಿತ ಪಡೀಸಿದ ಕುಸ್ತಿಪಟು ಸಾಕ್ಷಿ
- Krishna Shinde
- 15 Jan 2024 , 2:28 AM
- Delhi
- 165
ದೆಹಲಿ :ಭಾರತೀಯ ಕುಸ್ತಿಪಟು ಸಾಕ್ಷಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ ಹಾಗು ಭಾರತೀಯ ರೈಲ್ವೇಸ್‌ನೊಂದಿಗೆ ಸಹ ಕೆಲಸವನ್ನು ಪುನರಾರಂಭಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಅದು ಸಂಪೂರ್ಣ ಸುಳ್ಳು ಎಂದು ಕುಸ್ತಿಪಟು ಸಾಕ್ಷಿ ಟ್ವೀಟ್ ಮೂಲಕ ಖಚಿತ ಪಡೀಸಿದ್ದಾರೆ.

ಈ ಸುದ್ದಿ ಸಂಪೂರ್ಣ ತಪ್ಪು ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ ಎಂದು ಸಾಕ್ಷಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

— Sakshee Malikkh (@SakshiMalik) June 5, 2023ये खबर बिलकुल ग़लत है। इंसाफ़ की लड़ाई में ना हम में से कोई पीछे हटा है, ना हटेगा। सत्याग्रह के साथ साथ रेलवे में अपनी ज़िम्मेदारी को साथ निभा रही हूँ। इंसाफ़ मिलने तक हमारी लड़ाई जारी है। कृपया कोई ग़लत खबर ना चलाई जाए। pic.twitter.com/FWYhnqlinC










