
ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಚರ್ಚೆ ಆಗುತ್ತದೆ : ಸಚಿವ ದಿನೇಶ್
- shivaraj bandigi
- 14 Jan 2024 , 6:04 PM
- Belagavi
- 250
ಬೆಳಗಾವಿ :

ಉತ್ತರ ಕರ್ನಾಟಕದ ಸಮಸ್ಯೆಯ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಈ ಭಾಗದ ಸಮಸ್ಯೆಯ ಬಗ್ಗೆ ಜನರ ಆಶೋತ್ತರಗಳಿಗೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಈಗ ಬರದ ಪರಿಸ್ಥಿತಿ ಬಂದಾಗ ಚರ್ಚೆ ಆಗೇ ಆಗುತ್ತದೆ. ಉತ್ತರ ಕರ್ನಾಟಕದ ಸಮಸ್ಯೆದ ಬಗ್ಗೆ ಚರ್ಚೆಗೆ ಸಭಾಪತಿ ಕರೆದಿದ್ದಾರೆ. ಆ ಸಭೆಯಲ್ಲಿ ಎಲ್ಲರೂ ಭಾಗವಹಿಸಿ ಚರ್ಚಿಸಿದರೆ ಇಲ್ಲಿನ ಸಮಸ್ಯೆಗೆ ಪರಿಹಾರ ಆಗುತ್ತೆ ಎಂದರು.