ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡತಕ್ಕದ್ದು :ಎಚ್ .ಡಿ.ಕುಮಾರಸ್ವಾಮಿ

ಬೆಂಗಳೂರು : ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಎಚಡಿಕೆ ತಿಳಿಸಿದ್ದಾರೆ.

promotions

ಸೆಪ್ಟೆಂಬರ್ 14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸ ವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ, ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕು ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

promotions

Read More Articles