ಕೆ.ಆರ್ .ಆಸ್ಪತ್ರೆಗೆ ಕಾಯಕಲ್ಪ ನೀಡುವ ಕಾರ್ಯ ನಿರಂತರವಾಗಿ ನಡೆದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- Shivaraj Bandigi
- 11 Jan 2024 , 6:41 PM
- Mysuru
- 192
ಮೈಸೂರು : ಕೆ.ಆರ್ .ಆಸ್ಪತ್ರೆಗೆ ಕಾಯಕಲ್ಪ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಂ.ಆರ್.ಐ ಘಟಕ ಹಾಗೂ ಸುಟ್ಟ ಗಾಯಗಳ ನವೀಕೃತ ವಾರ್ಡ್ ನ್ನು ಉದ್ಘಾಟಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಬೇಡಿಕೆಪರಿಶೀಲನೆ
ಪ್ರಸ್ತುತ 1200 ಹಾಸಿಗೆಗಳಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬೇಡಿಕೆ ಇದೆ. ಇದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ತಿಳಿಸಿದರು.










