ಇಂದಿನ ರಾಶಿ ಭವಿಷ್ಯ ಆಗಸ್ಟ್ 07-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ
- Prasad Kambar
- 15 Jan 2024 , 12:57 AM
- Belagavi
- 273
ಮೇಷ ರಾಶಿ
ಬಂಧು ಮಿತ್ರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ದೈವ ದರ್ಶನಗಳನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯರ್ಥ ಖರ್ಚುಗಳನ್ನು ಮಾಡುತ್ತೀರಿ. ವೃತ್ತಿ ಮತ್ತು ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಮಾನಸಿಕ ಒತ್ತಡ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ

ವೃಷಭ ರಾಶಿ
ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ದೂರದ ದೇಶದ ಸ್ನೇಹಿತರಿಂದ ಅಮೂಲ್ಯ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಮಿಥುನ ರಾಶಿ
ಸ್ಥಿರಾಸ್ತಿ ಖರೀದಿಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ. ವೃತ್ತಿಪರ ಉದ್ಯೋಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ. ಬಾಲ್ಯ ಮಿತ್ರರೊಂದಿಗೆ ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳನ್ನು ಅಪ್ರಯತ್ನವಾಗಿ ಪೂರ್ಣಗೊಳಿಸುತ್ತೀರಿ. ಹೊಸ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕಿತ್ತಳೆ
ಕಟಕ ರಾಶಿ
ಆರ್ಥಿಕ ವಿಷಯದಲ್ಲಿ ಏರುಪೇರು ಉಂಟಾಗುತ್ತದೆ. ದೂರ ಪ್ರಯಾಣದಲ್ಲಿ ಶ್ರಮಶೀಲತೆ ಉಂಟಾಗುತ್ತದೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಸಹೋದರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಾಗದೆ ಅಧಿಕಾರಿಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕೆಂಪು
ಸಿಂಹ ರಾಶಿ
ದೂರ ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುವುದಿಲ್ಲ. ವೃತ್ತಿ ವ್ಯವಹಾರದಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ಉದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗದ ವಾತಾವರಣವು ಅಸ್ತವ್ಯಸ್ತವಾಗಿರುತ್ತದೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ಹಳೆಯ ಸ್ನೇಹಿತರ ಆಗಮನ ಸಂತಸ ತರುತ್ತದೆ. ಕುಟುಂಬ ಸದಸ್ಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಹೊಸ ಶಿಕ್ಷಣ ಉದ್ಯೋಗಾವಕಾಶಗಳು ದೊರೆಯುತ್ತವೆ. ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಸಂತೃಪ್ತಿಕರ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಬಿಳಿ
ತುಲಾ ರಾಶಿ
ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ಕೆಲವು ಸಂದರ್ಭಗಳಲ್ಲಿ ಕುಟುಂಬದ ಸದಸ್ಯರ ಸಲಹೆಯು ಕೂಡಿ ಬರುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸ್ಥಿರ ಆಸ್ತಿಗಳ ಮಾರಾಟದಿಂದ ಲಾಭವನ್ನು ಪಡೆಯುತ್ತೀರಿ. ವೃತ್ತಿ ವ್ಯವಹಾರಗಳು ಅನುಕೂಲಕರವಾಗಿರುತ್ತದೆ. ಉದ್ಯೋಗದಲ್ಲಿ ಪ್ರಗತಿ ಉಂಟಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ವೃಶ್ಚಿಕ ರಾಶಿ
ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ, ಕೈಗೊಂಡ ಕೆಲಸಗಳಲ್ಲಿ ಸಣ್ಣಪುಟ್ಟ ಅಡಚಣೆಗಳು ಉಂಟಾಗುತ್ತವೆ. ಕುಟುಂಬದ ಮುಖ್ಯಸ್ಥರ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಣದ ವಿಚಾರದಲ್ಲಿ ಆತುರ ಪಟ್ಟು ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವೃತ್ತಿ ವ್ಯಾಪಾರದಲ್ಲಿ ಸಮಸ್ಯಾತ್ಮಕ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಸಮಸ್ಯೆಗಳು ಉಂಟಾಗುತ್ತದೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಧನಸ್ಸು ರಾಶಿ
ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಬಂಧುಗಳೊಂದಿಗೆ ವಾದ ವಿವಾದಗಳು ಉಂಟಾಗುತ್ತವೆ. ಕೆಲವು ಸಂದರ್ಭಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ಕೆಲವರ ಮಾತುಗಳಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ವ್ಯವಹಾರದಲ್ಲಿ ಪಾಲುದಾರರೊಂದಿಗೆ ವಾದ ವಿವಾದಗಳು ಉಂಟಾಗುತ್ತವೆ. ನಿರುದ್ಯೋಗಿಗಳಿಗೆ ಅಧಿಕ ಶ್ರಮದಿಂದಲೂ ಫಲ ದೊರೆಯುವುದಿಲ್ಲ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ಮಕರ ರಾಶಿ
ಬಂಧುಗಳ ಆಗಮನದಿಂದ ಸಂತೋಷ ಉಂಟಾಗುತ್ತದೆ ಮತ್ತು ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ಮನೆಯಲ್ಲಿ ಮದುವೆ ಶುಭ ಕಾರ್ಯಗಳನ್ನು ನೆರವೇರುಸುತ್ತೀರಿ. ಹೊಸ ವಾಹನ ಭೂಮಿ ಲಾಭಗಳಿರುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿನ ಹೂಡಿಕೆಗಳಿಗೆ ತಕ್ಕಷ್ಟು ಲಾಭವನ್ನು ಪಡೆಯುತ್ತವೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಹಸಿರು
ಕುಂಭ ರಾಶಿ
ಕೈಗೆತ್ತಿಕೊಂಡ ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಬೇಕು. ಶ್ರಮದಾಯಕ ದೂರ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಉದ್ಯೋಗ ಮತ್ತು ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಮೀನ ರಾಶಿ
ಸೋದರ ಸಂಬಂಧಿಗಳೊಂದಿಗಿನ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಶುಭ ಕಾರ್ಯಗಳಿಗೆ ಹಣ ವ್ಯಯವಾಗುತ್ತದೆ. ಸಮಾಜದಲ್ಲಿ ಹಿರಿಯರ ಬೆಂಬಲ ಹೆಚ್ಚಾಗುತ್ತದೆ. ಅಂದುಕೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ದೊರೆಯುತ್ತದೆ. ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಸಹಾಯ ಸಹಕಾರ ದೊರೆಯುತ್ತದೆ. ವೃತ್ತಿ ವ್ಯಾಪಾರದಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಕಂದು










