ಇಂದಿನ ರಾಶಿ ಭವಿಷ್ಯ ಆಗಸ್ಟ್ 09-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ
- Prasad Kambar
- 14 Jan 2024 , 9:31 PM
- Belagavi
- 199
ಮೇಷ ರಾಶಿ
ಅಗತ್ಯಕ್ಕೆ ಸ್ನೇಹಿತರ ಸಹಾಯ ಸಹಕಾರಗಳು ದೊರೆಯುತ್ತವೆ. ವ್ಯಾಪಾರ-ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಮಧ್ಯದಲ್ಲಿ ಸ್ಥಗಿತಗೊಂಡ ಕೆಲಸಗಳನ್ನು ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಕೌಟುಂಬಿಕ ವಿಚಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತೀರಿ. ವೃತ್ತಿಪರ ಉದ್ಯೋಗಗಳಲ್ಲಿನ ಸಮಸ್ಯೆಗಳನ್ನು ಧೈರ್ಯದಿಂದ ಪರಿಹರಿಸುಕೊಳ್ಳುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕಿತ್ತಳೆ

ವೃಷಭ ರಾಶಿ
ಕೆಲವು ವ್ಯವಹಾರಗಳಲ್ಲಿ ಆತ್ಮೀಯರೊಂದಿಗೆ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ವಿಷಯಗಳ ಮೇಲೆ ಕೇಂದ್ರೀಕರಿಸುತ್ತೀರಿ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತದೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಮಿಥುನ ರಾಶಿ
ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹೊಸ ಸಾಲದ ಪ್ರಯತ್ನಗಳು ಫಲ ನೀಡುತ್ತವೆ. ಸಮಾಜದಲ್ಲಿ ಹಿರಿಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೈವಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಅನುಕೂಲಕರವಾಗಿರುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ
ಕಟಕ ರಾಶಿ
ಉದ್ಯೋಗಿಗಳ ಸಂಬಳಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿ ದೊರೆಯುತ್ತದೆ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಕಾಶ ದೊರೆಯುತ್ತದೆ. ಸಮಾಜದಲ್ಲಿ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ಸ್ಥಿರಾಸ್ತಿ ವಿಷಯಗಳಲ್ಲಿನ ಸಮಸ್ಯೆಗಳನ್ನು ನಿವಾರಿಸುತ್ತೀರಿ. ವೃತ್ತಿಪರ ವ್ಯವಹಾರಗಳು ತೃಪ್ತಿಕರವಾಗಿ ಸಾಗುತ್ತವೆ. ಆರ್ಥಿಕವಾಗಿ ಅನುಕೂಲತೆ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಸಿಂಹ ರಾಶಿ
ಕೆಲವು ವ್ಯವಹಾರಗಳು ಮಧ್ಯದಲ್ಲಿ ನಿಲ್ಲುತ್ತವೆ. ವ್ಯಾಪಾರಗಳಲ್ಲಿ ಎರೆಡೆರೆದು ಆಲೋಚನೆಗಳಿಂದ ತೊಂದರೆ ಉಂಟಾಗುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕುಟುಂಬ ಸದಸ್ಯರೊಂದಿಗೆ ವಿವಾದಗಳಿರುತ್ತವೆ. ಮಿತ್ರರೊಂದಿಗೆ ದೇವರ ದರ್ಶನವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಸಿರು
ಕನ್ಯಾ ರಾಶಿ
ಹೊಸ ಸಾಲದ ಪ್ರಯತ್ನಗಳು ಸ್ವಲ್ಪ ಕಷ್ಟದಿಂದ ಪೂರ್ಣಗೊಳ್ಳುತ್ತವೆ. ಬಂಧು ಮಿತ್ರರೊಂದಿಗೆ ಮಾತಿನ ಚಕಮಕಿ ನಡೆಯುತ್ತದೆ. ದೂರದ ಬಂಧುಗಳಿಂದ ಆಸಕ್ತಿಕರ ವಿಷಯಗಳು ತಿಳಿಡು ಬರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಲಾಭವನ್ನು ಪಡೆಯುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ತುಲಾ ರಾಶಿ
ಬಂಧು ಮಿತ್ರರೊಂದಿಗೆ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತೀರಿ. ಭೂ ಮಾರಾಟದಲ್ಲಿ ವಿಶೇಷವಾದ ಲಾಭವನ್ನು ಪಡೆಯುತ್ತೀರಿ. ಕೈಗೆತ್ತಿಕೊಂಡ ಕೆಲಸದಲ್ಲಿ ಅಪ್ರಯತ್ನ ಕಾರ್ಯ ಸಿದ್ಧತೆ ದೊರೆಯುತ್ತದೆ. ಕುಟುಂಬದ ಹಿರಿಯರೊಂದಿಗೆ ಸೌಹಾರ್ದಯುತವಾಗಿ ವರ್ತಿಸುತ್ತೀರಿ. ವೃತ್ತಿ ಮತ್ತು ಉದ್ಯೋಗದಲ್ಲಿ ಸ್ಥಾನಮಾನಗಳು ಹೆಚ್ಚಾಗುತ್ತವೆ. ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಬಿಳಿ
ವೃಶ್ಚಿಕ ರಾಶಿ
ಬಂಧುಮಿತ್ರರೊಂದಿಗಿನ ದೀರ್ಘಕಾಲದ ವಿವಾದಗಳು ಇತ್ಯರ್ಥವಾಗುತ್ತವೆ. ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಗೌರವ ಪ್ರತಿಷ್ಟೆಗಳು ಹೆಚ್ಚಾಗುತ್ತವೆ. ವೃತ್ತಿ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತೀರಿ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ಧನಸ್ಸು ರಾಶಿ
ಹಣಕಾಸಿನ ವ್ಯವಹಾರಗಳು ಸೀಮಿತವಾಗಿರುತ್ತವೆ. ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಆಕಸ್ಮಿಕವಾಗಿ ಪ್ರಯಾಣದ ಸೂಚನೆಗಳಿವೆ. ಮಕ್ಕಳ ಶೈಕ್ಷಣಿಕ ವಿಷಯಗಳು ನಿರಾಶಾದಾಯಕವಾಗಿರುತ್ತವೆ. ಕುಟುಂಬ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು
ಮಕರ ರಾಶಿ
ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸಂಬಂಧಿಕರಿಂದ ಬಂದ ಸುದ್ದಿ ನಿರಾಶಾದಾಯಕ ವಾಗಿರುತ್ತದೆ. ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಸಾಕಷ್ಟು ವಿಶ್ರಾಂತಿ ಇರುವುದಿಲ್ಲ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಹಸಿರು
ಕುಂಭ ರಾಶಿ
ಆತ್ಮೀಯರೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಮಿತ್ರರ ಸಲಹೆ ಮೇರೆಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ಸಹೋದರರೊಂದಿಗೆ ಸ್ಥಿರಾಸ್ತಿ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಹೊಸ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿನ ಆರ್ಥಿಕ ಸಮಸ್ಯೆಗಳಿಂದ ಹೊರಬರುತ್ತೀರಿ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ಮೀನ ರಾಶಿ
ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಹಠಾತ್ ದೂರ ಪ್ರಯಾಣದ ಸೂಚನೆಗಳಿವೆ. ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲರಾಗುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಹಸಿರು










