ಇಂದಿನ ರಾಶಿ ಭವಿಷ್ಯ ಆಗಸ್ಟ್-09-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ.

ಮೇಷ ರಾಶಿ

promotions

ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ ತಲೆ ನೋವು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ.

promotions

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ನೇರಳೆ

ವೃಷಭ ರಾಶಿ

ವೃತ್ತಿ ವ್ಯವಹಾರದಲ್ಲಿ ಗೊಂದಲ ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳು ಮುಂದೆಸಾಗದೆ ನಿರಾಶೆ ಉಂಟಾಗುತ್ತದೆ. ಮನೆಯಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಕೆಲಸದ ಹೊರೆಯಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಬಿಳಿ

ಮಿಥುನ ರಾಶಿ

ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡು ಬರುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕೆಂಪು

ಕರ್ಕ ರಾಶಿ

ಹಠಾತ್ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ ಮತ್ತು ವ್ಯಾಪಾರದಲ್ಲಿ ಗೊಂದಲ ಉಂಟಾಗುತ್ತದೆ. ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

ಸಿಂಹ ರಾಶಿ

ಹೊಸ ವಾಹನ ಲಾಭವಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ವ್ಯಾಪಾರಗಳು ಲಾಭ ಹಾದಿಯಲ್ಲಿ ಸಾಗುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಕೆಂಪು

ಕನ್ಯಾ ರಾಶಿ

ಪ್ರಯಾಣದಲ್ಲಿ ಅಡಚಣೆ ಉಂಟಾಗುತ್ತದೆ. ಆರ್ಥಿಕವಾಗಿ ಸ್ವಲ್ಪ ನಿರಾಸೆ ಯುಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲಕಾಣುವುದಿಲ್ಲ. ಸಂಬಂಧಿಕರೊಂದಿಗೆ ಅನಿರೀಕ್ಷಿತ ವಾದ-ವಿವಾದಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೇರಳೆ

ತುಲಾ ರಾಶಿ

ಯೋಜಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ದೈವಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಹಠಾತ್ ಧನ ಲಾಭ ದೊರೆಯುತ್ತದೆ ಮತ್ತು ನಿರುದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ಮನೆಯ ಹೊರಗೆ ಪರಿಚಯಗಳು ಹೆಚ್ಚಾಗುತ್ತವೆ. ವೃತ್ತಿ ವ್ಯವಹಾರದಲ್ಲಿ ಲಾಭ ಪಡೆಯುತ್ತೀರಿ. ಉದ್ಯೋಗದಲ್ಲಿ ಒತ್ತಡದಿಂದ ಮುಕ್ತಿ ದೊರೆಯುತ್ತದೆ.

ಅದೃಷ್ಟದ ದಿಕ್ಕು:ವಾಯುವ್ಯ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಹಳದಿ

ವೃಶ್ಚಿಕ ರಾಶಿ

ಎಲ್ಲಾ ಕಡೆಯಿಂದ ಆದಾಯ ದೊರೆಯುತ್ತದೆ. ಹೊಸವಾಹನಗಳು ಮತ್ತು ಜಮೀನುಗಳನ್ನು ಖರೀದಿಸಲಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಸಮಸ್ಯೆಗಳಿರುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಹಸಿರು

ಧನು ರಾಶಿ

ಸಹೋದರರೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಕೆಲಸದ ಒತ್ತಡದಿಂದ ತಲೆನೋವು ಉಂಟಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನೀರುತ್ಸಾಹಗೊಳಿಸುತ್ತವೆ. ಉದ್ಯೋಗಗಳಲ್ಲಿಗೊಂದಲ ಮಯ ಪರಿಸ್ಥಿತಿಗಳಿರುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

ಮಕರ ರಾಶಿ

ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ಸ್ವಲ್ಪ ಬದಲಾವಣೆಗಳಾಗುತ್ತವೆ. ಹಣಕಾಸಿನ ಸಮಸ್ಯೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ, ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಬೂದು

ಕುಂಭ ರಾಶಿ

ಬೆಲೆ ಬಾಳುವ ವಸ್ತ್ರಆಭರಣಗಳನ್ನು ಖರೀದಿಸಲಾಗುತ್ತದೆ. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

ಮೀನ ರಾಶಿ

ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹಠಾತ್ ಆರ್ಥಿಕ ಲಾಭದಸೂಚನೆಗಳಿವೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗಿಗಳಿಗೆ ವಿಶೇಷ ಮನ್ನಣೆ ದೊರೆಯುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಗುಲಾಬಿ

Read More Articles