ಇಂದಿನ ರಾಶಿ ಭವಿಷ್ಯ ಡಿಸೆಂಬರ 11-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ

ಮೇಷ ರಾಶಿ

promotions

ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಪ್ರಮುಖ ಕಾರ್ಯಗಳನ್ನು ಮುಂದೂಡುವುದು ಉತ್ತಮ. ವೃತ್ತಿ ವ್ಯವಹಾರಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ.ಆರ್ಥಿಕ ಸಮಸ್ಯೆಗಳಿಂದಾಗಿ ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ.

promotions

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ವೃಷಭ ರಾಶಿ

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತವೆ. ದೂರದ ಪ್ರಯಾಣದಲ್ಲಿ ರಸ್ತೆ ತಡೆಗಳಿರುತ್ತವೆ. ವ್ಯಾಪಾರ ವಹಿವಾಟು ನಿರಾಶಾದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ಅಗತ್ಯವಿದ್ದಾಗ ಕೈಗೆ ಹಣ ಸಿಗದೆ ತೊಂದರೆ ಅನುಭವಿಸುತ್ತೀರಿ. ಮಕ್ಕಳ ಶಿಕ್ಷಣ ಮತ್ತು ಉದ್ಯೋಗದ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ಮಿಥುನ ರಾಶಿ

ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ಸಹೋದರರೊಂದಿಗಿನ ಆಸ್ತಿ ವಿವಾದಗಳು ಬಗೆಹರಿಯುತ್ತವೆ. ವ್ಯಾಪಾರಗಳು ಆಶಾದಾಯಕವಾಗಿರುತ್ತವೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಬಂಧುಗಳೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೆಲಸಗಳಲ್ಲಿ ಕಾರ್ಯ ಸಿದ್ಧತೆ ಇರುತ್ತದೆ. ಗೌರವಕ್ಕೆ ಕೊರತೆ ಇರುವುದಿಲ್ಲ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕೆಂಪು

ಕಟಕ ರಾಶಿ

ಬಂಧುಗಳಿಂದ ಶುಭ ವಾರ್ತೆ ದೊರೆಯುತ್ತದೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಹೊಸ ವಾಹನ ಖರೀದಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಯಶಸ್ವಿಯಾಗುತ್ತವೆ. ವ್ಯಾಪಾರ ವಿಸ್ತರಣೆಗಾಗಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೈವಿಕ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದ

ಸಿಂಹ ರಾಶಿ

ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗಿನ ಒಪ್ಪಂದಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ಪರಿಸ್ಥಿತಿಯು ಸ್ವಲ್ಪ ಗೊಂದಲಮಯವಾಗಿರುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ಆಪ್ತರೊಂದಿಗೆ ವಾದ ವಿವಾದಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮ ಹೆಚ್ಚಾದರು ಫಲ ಕಾಣುವುದಿಲ್ಲ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಕೆಂಪು

ಕನ್ಯಾ ರಾಶಿ

ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ.ಹಳೆಯ ಸಾಲ ತೀರಿಸಲು ಹೊಸ ಸಾಲ ಮಾಡಲಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಆತುರ ಒಳ್ಳೆಯದಲ್ಲ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಉದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ದೂರದ ಪ್ರಯಾಣದಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೇರಳ

ತುಲಾ ರಾಶಿ

ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ಆಪ್ತ ಸ್ನೇಹಿತರೊಂದಿಗೆ ಮನೆಯಲ್ಲಿ ಖುಷಿಯಿಂದ ಕಾಲ ಕಳೆಯುತ್ತೀರಿ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಉತ್ಸಹದಯಕ ವಾತಾವರಣವಿರುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳಲ್ಲಿ ಕುಟುಂಬ ಸದಸ್ಯರು ಸಹಾಯ ಮಾಡುತ್ತಾರೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ವೃಶ್ಚಿಕ ರಾಶಿ

ವ್ಯಾಪಾರಗಳು ಲಾಭದಾಯಕವಾಗಿ ಸಾಗುತ್ತವೆ. ಸ್ನೇಹಿತರೊಂದಿಗೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಮನೆಯ ಹೊರಗೆ ಸಮಸ್ಯೆಗಳು ಸ್ವಲ್ಪಮಟ್ಟಿಗೆ ಕಿರಿಕಿರಿ ಉಂಟುಮಾಡುತ್ತವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಸಾಲಗಾರರಿಂದ ಒತ್ತಡ ಅಧಿಕವಾಗಿರುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ: ಬೂದು ಬಣ್ಣ 

ಧನಸ್ಸು ರಾಶಿ

ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಸಮಾಜದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ನಿಕಟ ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಉದ್ಯೋಗಗಳಲ್ಲಿ ಏರುಪೇರುಗಳನ್ನು ನಿವಾರಿಸಿಕೊಂಡು ಮುನ್ನಡೆಯುತ್ತೀರಿ. ಭೋಜನ ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ಆಹ್ವಾನಗಳು ದೊರೆಯುತ್ತವೆ. ಕೈಗೊಂಡ ಕೆಲಸಗಳು ಸುಗಮವಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೀಲ

ಮಕರ ರಾಶಿ

ಸ್ನೇಹಿತರೊಂದಿಗೆ ವಿನಾಕಾರಣ ವಾದ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ಬಗ್ಗೆ ಶ್ರದ್ಧೆ ವಹಿಸಬೇಕು. ಖರ್ಚು ಮತ್ತು ಪ್ರಯತ್ನದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಸ್ನೇಹಿತ ರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ವ್ಯವಹಾರಗಳು ಮುಂದುವರೆಯದೆ ಕಿರಿಕಿರಿಗಳು ಹೆಚ್ಚಾಗುತ್ತವೆ. ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳತ್ತ ಗಮನ ಹರಿಸುತ್ತೀರಿ.

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳ

ಕುಂಭ ರಾಶಿ

ಮನೆಯ ಹೊರಗೆ ವಿಚಿತ್ರ ಘಟನೆಗಳು ನಡೆಯುತ್ತವೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿಯಾಗಿ ಸಾಗುತ್ತವೆ. ಪ್ರೀತಿಪಾತ್ರರಿಂದ ಅಪರೂಪದ ಆಹ್ವಾನಗಳಿರುತ್ತವೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:1 

ಅದೃಷ್ಟದ ಬಣ್ಣ:ಕೆಂಪು

ಮೀನ ರಾಶಿ

ಭೂಮಿ ಸಂಬಂಧಿತ ಖರೀದಿಗಳು ಲಾಭದಾಯಕ ವಾಗಿರುತ್ತವೆ. ಹೊಸ ಕೆಲಸಗಳನ್ನು ಆರಂಭಿಸಲಾಗುತ್ತದೆ. ಸಂಬಂಧಿಕರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಗಳು ದೊರೆಯುತ್ತದೆ. ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಉದ್ಯೋಗದಲ್ಲಿ ನಿಮ್ಮ ನಿರ್ಧಾರಗಳನ್ನು ಎಲ್ಲರೂ ಗೌರವಿಸುತ್ತಾರೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

Read More Articles