ಇಂದಿನ ರಾಶಿ ಭವಿಷ್ಯ ಫೆಬ್ರವರಿ-20-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ
- Prasad Kambar
- 20 Feb 2024 , 6:05 AM
- Belagavi
- 652
ಮೇಷ ರಾಶಿ

ಬಂಧುಗಳಿಂದವಾದ ವಿವಾದಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು. ವಾಹನ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಶೈಕ್ಷಣಿಕ ವಿಷಯಗಳು ನಿರಾಶಾದಾಯಕವಾಗಿರುತ್ತವೆ.

ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ವೃಷಭ ರಾಶಿ
ಎಲ್ಲ ಕಡೆಯಿಂದಲೂ ಆದಾಯ ದೊರೆಯುತ್ತದೆ. ಮನೆಯ ಹೊರಗೆ ಸಂತಸದ ವಾತಾವರಣವಿರುತ್ತದೆ. ಹೊಸ ವಸ್ತ್ರ ವಸ್ತು ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಹೊಸ ವಾಹನ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸ ಉದ್ಯೋಗ ವಿಷಯಗಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಸಿಗುತ್ತದೆ.
ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ಮಿಥುನ ರಾಶಿ
ವೃತ್ತಿ ವ್ಯವಹಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಮಾನಸಿಕ ಆಲೋಚನೆಗಳು ತೊಂದರೆ ಕೊಡುತ್ತವೆ. ಬಾಲ್ಯದ ಗೆಳೆಯರೊಂದಿಗೆ ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಬೂದು
ಕರ್ಕ ರಾಶಿ
ವೃತ್ತಿಪರ ವ್ಯವಹಾರದಲ್ಲಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ ಮತ್ತು ಪ್ರಮುಖ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ನಿರುದ್ಯೋಗಿಗಳ ಕಷ್ಟಕ್ಕೆ ಫಲ ಸಿಗಲಿದೆ. ಕೌಟುಂಬಿಕ ವಿಚಾರಗಳಲ್ಲಿ ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಆರ್ಥಿಕ ಸ್ಥಿತಿ ನಿರೀಕ್ಷೆಯಂತೆ ಇರುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ: ಹಳದಿ
ಸಿಂಹ ರಾಶಿ
ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಕುಟುಂಬದಲ್ಲಿ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುದಿಲ್ಲ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಕನ್ಯಾ ರಾಶಿ
ವೃತ್ತಿ ಮತ್ತು ಉದ್ಯೋಗಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುತ್ತೀರಿ. ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ವ್ಯಾಪಾರಗಳು ನಿರೀಕ್ಷೆಗೂ ಮೀರಿದ ಲಾಭವನ್ನು ಪಡೆಯುತ್ತವೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲು ಇದ್ದಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಸದಸ್ಯರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಸಿರು
ತುಲಾ ರಾಶಿ
ಬಂಧು ಮಿತ್ರರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಾಲಕಳೆಯುತ್ತೀರಿ. ಕೈಗೆತ್ತಿಕೊಂಡ ಕಾರ್ಯದಲ್ಲಿ ಅಡೆತಡೆಗಳಿದ್ದರೂ ಆತ್ಮಸ್ಥೈರ್ಯದಿಂದ ಪೂರ್ಣಗೊಳಿಸುತ್ತೀರಿ. ಹಣಕಾಸಿನ ತೊಂದರೆಗಳನ್ನು ನಿವಾರಿಸಿ, ಸಾಲಗಳನ್ನು ಸಹ ಇತ್ಯರ್ಥಗೊಳಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ದೂರ ಪ್ರಯಾಣ,ಲಾಭದಾಯಕವಾಗಿರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ
ವೃತ್ತಿಪರ ಉದ್ಯೋಗಗಳಲ್ಲಿ ಉತ್ತಮ ಸೌಲಭ್ಯಗಳು ದೊರೆಯುತ್ತವೆ. ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ವ್ಯಾಪಾರಗಳು ಅನುಕೂಲಕರ ವಾಗಿರುತ್ತವೆ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಭವಿಷ್ಯದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದು ಕೊಳ್ಳಲಾಗುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಗುಲಾಬಿ ಬಣ್ಣ
ಧನು ರಾಶಿ
ನಿಗದಿತ ಸಮಯಕ್ಕೆ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಬಂಧುಮಿತ್ರರೊಂದಿಗೆ ಸಣ್ಣ ಪುಟ್ಟ ವಿವಾದಗಳು ಉಂಟಾಗುತ್ತವೆ. ಔದ್ಯೋಗಿಕ ಕೆಲಸಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ಇರಬೇಕು. ಇತರರ ಬಗ್ಗೆ ನಿಮ್ಮ ಆಲೋಚನೆಯನ್ನು ಬದಲಾಯಿಸುವುದು ಉತ್ತಮ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಮಕರ ರಾಶಿ
ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುತ್ತದೆ. ಹೊಸ ವಸ್ತು ಮತ್ತು ವಾಹನ ಸೌಲಭ್ಯಗಳು ದೊರೆಯುತ್ತವೆ. ಹಣಕಾಸಿನ ವಿಷಯದಲ್ಲಿ ಮಾಡುವ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ದೂರದ ಪ್ರಯಾಣದ ಸೂಚನೆಗಳಿವೆ. ಆದಾಯ ಹೆಚ್ಚಾಗುತ್ತದೆ . ಬಂಧುಮಿತ್ರರ ಭೇಟಿ ಸಂತಸ ತರುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಹಳದಿ
ಕುಂಭ ರಾಶಿ
ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಹಿರಿಯರ ಸಲಹೆಯನ್ನು ತೆಗೆದು ಕೊಳ್ಳುವುದು ಉತ್ತಮ. ಉದ್ಯೋಗದ ವಾತಾವರಣವು ಅನುಕೂಲಕರ ವಾಗಿರುತ್ತದೆ. ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಹಳದಿ
ಮೀನ ರಾಶಿ
ಆರಂಭಿಸಿದ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವೃತ್ತಿಪರ ವ್ಯಾಪಾರಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿದ್ದು, ತಲೆನೋವು ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ನೀಲಿ










