ಇಂದಿನ ರಾಶಿ ಭವಿಷ್ಯ ಜನವರಿ-26-2024 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ

ಮೇಷ ರಾಶಿ

promotions

ಸಾಲದ ಸಮಸ್ಯೆಗಳಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆದಾಯ ಕನಿಷ್ಠ ಮಟ್ಟದಲ್ಲಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಹೊಸ ಸಮಸ್ಯೆಗಳಿರುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಗಳಿರುತ್ತವೆ. ವೃತ್ತಿಪರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುವುದಿಲ್ಲ.

promotions

ಅದೃಷ್ಟದ ದಿಕ್ಕು:ಆಗ್ನೇಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೇರಳೆ

ವೃಷಭ ರಾಶಿ

ಹೊಸ ವಾಹನ ಖರೀದಿಸುತ್ತೀರಿ. ವೃತ್ತಿ ವ್ಯಾಪಾರಗಳು ಹೆಚ್ಚು ಉತ್ಸಾಹದಾಯಕವಾಗಿ ಸಾಗುತ್ತವೆ. ಕೈಗೆತ್ತಿ ಕೊಂಡ ಕೆಲಸಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುತ್ತದೆ. ಸಹೋದರರಿಂದ ಶುಭ ಸುದ್ದಿ ದೊರೆಯುತ್ತದೆ. ಸಹೋದರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೀಲಿ

ಮಿಥುನ ರಾಶಿ

ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೆಲವು ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಹಣದ ವ್ಯವಹಾರಗಳು ಕೂಡಿ ಬರುವುದಿಲ್ಲ. ಹೊಸ ಉದ್ಯಮ ಗಳನ್ನು ಪ್ರಾರಂಭಿಸಲು ಅಡೆತಡೆಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿನ ಹೆಚ್ಚುವರಿ ಜವಾಬ್ದಾರಿ ಗಳಿಂದ ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ಗೊಂದಲಮಯ ಸನ್ನಿವೇಶಗಳಿರುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ಹಸಿರು

ಕಟಕ ರಾಶಿ

ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಹೊಸ ವಿಷಯಗಳತ್ತ ಗಮನ ಹರಿಸುತ್ತೀರಿ. ವಿದ್ಯಾರ್ಥಿಗಳು ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತಾರೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ಬಾಲ್ಯದ ಗೆಳೆಯರ ನೆರವಿನಿಂದ ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಮನೆಯ ಹೊರಗೆ ಕೆಲವು ಆಶ್ಚರ್ಯಕರ ಘಟನೆಗಳು ನಡೆಯುತ್ತವೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಹಳದಿ

ಸಿಂಹ ರಾಶಿ

ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಬಾಲ್ಯದ ಗೆಳೆಯರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಂಡು ನಷ್ಟ ಅನುಭವಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಟೀಕೆಗಳು ಎದುರಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ಕನ್ಯಾ ರಾಶಿ

ಹೊಸ ಕಾರ್ಯಗಳಿಗೆ ಚಾಲನೆ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಅನುಕೂಲಿಸಿ ಹಳೆಯ ಸಾಲಗಳನ್ನು ಇತ್ಯರ್ಥ ಪಡಿಸಲಾಗುತ್ತದೆ. ಕೆಲವು ವ್ಯವಹಾರಗಳಲ್ಲಿ ಆತ್ಮೀಯರ ಸಲಹೆ ಕೂಡಿ ಬರುತ್ತದೆ. ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ವಿಸ್ತರಣೆಗಾಗಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಕೆಂಪು

ತುಲಾ ರಾಶಿ

ಉದ್ಯೋಗದಲ್ಲಿ ಎಲ್ಲರೊಂದಿಗೆ ಸೌಹಾರ್ದತೆಯಿಂದ ವರ್ತಿಸಿ ಪ್ರಶಂಸೆಗೆ ಪಾತ್ರರಾಗುತ್ತೀರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಹೊಸ ಉತ್ಸಾಹದಿಂದ ಮುನ್ನಡೆಯುತ್ತಾರೆ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ವೃಶ್ಚಿಕ ರಾಶಿ

ವೃತ್ತಿಪರ ವ್ಯವಹಾರದಲ್ಲಿ ಅನಿರೀಕ್ಷಿತ ಸ್ಥಾನಚಲನೆ ಸೂಚನೆಗಳಿವೆ. ಮನೆಯ ಹೊರಗೆ ಒತ್ತಡಗಳು ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ನೀರುತ್ಸಾಹಗೊಳಿಸುತ್ತವೆ. ಪಿತೃ ವರ್ಗದ ಬಂಧುಗಳೊಂದಿಗೆ ವಿವಾದಗಳಿರುತ್ತವೆ. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಒಳ್ಳೆಯದಲ್ಲ. ಕುಟುಂಬದ ಸದಸ್ಯರ ವರ್ತನೆಯು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಬಿಳಿ

ಧನಸ್ಸು ರಾಶಿ

ವ್ಯಾಪಾರದಲ್ಲಿ ಹೆಚ್ಚಿನ ಪ್ರಯತ್ನದಿಂದ ಸ್ವಲ್ಪ ಫಲಿತಾಂಶವನ್ನು ಪಡೆಯುತ್ತೀರಿ. ನಿರುದ್ಯೋಗ ಪ್ರಯತ್ನಗಳು ಖಿನ್ನತೆಯನ್ನುಂಟು ಮಾಡುತ್ತವೆ. ದೂರಪ್ರಯಾಣವನ್ನು ಮುಂದೂಡುವುದು ಉತ್ತಮ. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳ್ಳೆಯದಲ್ಲ. ವೃತ್ತಿ ಪರ ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

 ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ನೇರಳೆ

ಮಕರ ರಾಶಿ

ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಮಕ್ಕಳ ವಿವಾಹ ವಿಷಯದ ಪ್ರಸ್ತಾಪವಿರುತ್ತದೆ. ಮನೆ ನಿರ್ಮಾಣ ಕಾರ್ಯಗಳು ವೇಗಗೊಳ್ಳುತ್ತವೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ಇತರರಿಗೆ ಅಗತ್ಯಕ್ಕೆ ಧನ ಸಹಾಯ ಮಾಡುತ್ತೀರಿ. ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ದೊರೆಯುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:7

ಅದೃಷ್ಟದ ಬಣ್ಣ:ಕಂದು ಬಣ್ಣ

ಕುಂಭ ರಾಶಿ

ಹಣಕಾಸಿನ ವ್ಯವಹಾರಗಳು ಆಶಾದಾಯಕ ವಾಗಿರುತ್ತವೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಕೆಲವು ವ್ಯವಹಾರಗಳಲ್ಲಿ ಆಪ್ತ ಸ್ನೇಹಿತರ ಸಹಾಯ ದೊರೆಯುತ್ತದೆ. ವ್ಯಾಪಾರ ಉದ್ಯೋಗಗಳು ಲಾಭದಾಯಕವಾಗಿರುತ್ತವೆ. ಮನೆ ನಿರ್ಮಾಣ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5 

ಅದೃಷ್ಟದ ಬಣ್ಣ: ಹಳದಿ

ಮೀನ ರಾಶಿ

ಉದ್ಯೋಗದಲ್ಲಿ ಸಣ್ಣಪುಟ್ಟ ವಿವಾದಗಳು ಎದುರಾಗುತ್ತವೆ. ಹಣಕಾಸಿನ ವ್ಯವಹಾರಗಳು ನಿಧಾನಗೊಳ್ಳುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮ ಪಡಬೇಕು. ಹೊಸಹೂಡಿಕೆಗಳನ್ನು ಮರುಪರಿಶೀಲಿಸುವುದು ಉತ್ತಮ. ಮಕ್ಕಳ ಶೈಕ್ಷಣಿಕ ವಿಷಯಗಳು ಸ್ವಲ್ಪಮಟ್ಟಿಗೆ ನಿರುತ್ಸಾಹಗೊಳಿಸುತ್ತವೆ. ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ ಪ್ರಮುಖ ವ್ಯವಹಾರಗಳು ಮುಂದೂಡಲ್ಪಡುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

Read More Articles