ಇಂದಿನ ರಾಶಿ ಭವಿಷ್ಯ ಜೂಲೈ 02-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ
- Prasad Kambar
- 4 Jan 2024 , 5:54 AM
- Belagavi
- 181
ಮೇಷ ರಾಶಿ
ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುವುದರಿಂದ ವಿಶ್ರಾಂತಿ ಸಿಗುವುದಿಲ್ಲ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಕಂಡುಬರುತ್ತವೆ. ವೃತ್ತಿಪರ ವ್ಯವಹಾರಗಳು ಇನ್ನಷ್ಟು ಹತಾಶೆಯನ್ನುಂಟುಮಾಡುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯು ಕಳಪೆಯಾಗಿರುತ್ತದೆ.

ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕೆಂಪು

ವೃಷಭ ರಾಶಿ
ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಪ್ರಮುಖ ವಿಷಯಗಳಲ್ಲಿ ಕುಟುಂಬ ಸದಸ್ಯರ ಸಲಹೆಗಳು ಕೂಡಿ ಬರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ ಮತ್ತು ಉದ್ಯೋಗದಲ್ಲಿನ ವಿವಾದಗಳು ಇತ್ಯರ್ಥವಾಗುತ್ತವೆ. ಹೊಸ ವಾಹನ ಖರೀದಿಸಲಾಗುತ್ತದೆ. ಕೌಟುಂಬಿಕ ವಾತಾವರಣ ಸಡಗರದಿಂದ ಕೂಡಿರುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಹಳದಿ
ಮಿಥುನ ರಾಶಿ
ಮನೆಯಲ್ಲಿ ಮದುವೆಯ ಬಗ್ಗೆ ಪ್ರಸ್ತಾಪವಾಗುತ್ತದೆ. ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ. ಸಂಬಂಧಿಕರಿಂದ ಶುಭ ಸುದ್ದಿ ತಿಳಿದು ಬರುತ್ತದೆ. ಹೊಸ ವಸ್ತು ಮತ್ತು ವಾಹನ ಲಾಭಗಳು ದೊರೆಯುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ವಿಶ್ವಾಸದಿಂದ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಗಳಿಸುತ್ತೀರಿ. ಕೆಲಸದ ವಾತಾವರಣವು ಅನುಕೂಲಕರವಾಗಿರುತ್ತದೆ. ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಕಂದು ಬಣ್ಣ
ಕಟಕ ರಾಶಿ
ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳು ಉಂಟಾಗುತ್ತವೆ. ಪ್ರಯಾಣಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ದೈವಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವಹಿವಾಟುಗಳು ಮಂಡಗತಿಯಲ್ಲಿ ಸಾಗುತ್ತವೆ. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ಮಕ್ಕಳ ಶಿಕ್ಷಣ ಮತ್ತು ಉದ್ಯೋಗ ವಿಷಯಗಳಲ್ಲಿ ಸ್ವಲ್ಪ ಹತಾಶೆ ಉಂಟಾಗುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ಸಿಂಹ ರಾಶಿ
ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಬಂಧುಗಳೊಂದಿಗೆ ಸಮಸ್ಯೆಗಳಿರುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವೃತ್ತಿಪರ ವ್ಯವಹಾರಗಳಳಲ್ಲಿ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗಸ್ಥರು ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ, ನಿರುದ್ಯೋಗಿಗಳಿಗೆ ಮತ್ತಷ್ಟು ಕಷ್ಟ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೇರಳೆ
ಕನ್ಯಾ ರಾಶಿ
ಮಕ್ಕಳಿಗೆ ಹೊಸ ಶೈಕ್ಷಣಿಕ ಅವಕಾಶಗಳು ಸಿಗುತ್ತವೆ. ಕೆಲವು ವ್ಯವಹಾರಗಳನ್ನು ಅಡೆತಡೆಗಳ ನಡುವೆಯೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಮಂತ್ರಣಗಳನ್ನು ಸ್ವೀಕರಿಸುತ್ತೀರಿ. ವೃತ್ತಿಪರ ವ್ಯವಹಾರದಲ್ಲಿ ನಷ್ಟವನ್ನು ಸರಿದೂಗಿಸುತ್ತೀರಿ. ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ.ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕೆಂಪು
ತುಲಾ ರಾಶಿ
ಪ್ರಯಾಣದಲ್ಲಿ ವಾಹನ ತೊಂದರೆಗಳು ಉಂಟಾಗುತ್ತವೆ. ನಿಗದಿತ ಸಮಯಕ್ಕೆ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತಿದೆ. ಬಂಧು ಮಿತ್ರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ವ್ಯಾಪಾರಿಗಳು ಸಿಕ್ಕ ಅವಕಾಶಗಳನ್ನು ಕೈ ಜಾರದಂತೆ ನೋಡಿಕೊಳ್ಳಬೇಕು. ಉದ್ಯೋಗಕ್ಕೆ ಸಂಬಂಧಿಸಿದಂತೆ ಮೇಲಧಿಕಾರಿಗಳೊಂದಿಗೆ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ
ವೃಶ್ಚಿಕ ರಾಶಿ
ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ದೈವಿಕ ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ಫಲಿಸುತ್ತವೆ.ವೃತ್ತಿಪರ ವ್ಯವಹಾರದಲ್ಲಿ ಹೆಚ್ಚಿನ ಫಲಿತಾಂಶಗಳನ್ನು ಪಡೆಯುತ್ತೀರಿ. ಉದ್ಯೋಗಿಗಳು ತಮ್ಮ ಕಠಿಣ ಪರಿಶ್ರಮಕ್ಕೆ ತಕ್ಕಂತೆ ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಹೊಸ ವಾಹನ ಖರೀದಿಸಲಾಗುತ್ತದೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ಹಸಿರು
ಧನಸ್ಸು ರಾಶಿ
ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗ ವಾತಾವರಣವು ನಿರುತ್ಸಾಹದಾಯಕವಾಗಗಿರುತ್ತದೆ. ದೂರದ ಪ್ರಯಾಣದಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ. ಹಣದ ವಿಚಾರದಲ್ಲಿ ಜಾಗರೂಕತೆಯಿಂದ ವ್ಯವಹರಿಸಬೇಕು.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಳದಿ
ಮಕರ ರಾಶಿ
ವೃತ್ತಿಪರ ವ್ಯವಹಾರಗಳು ಮತ್ತಷ್ಟು ಉನ್ನತ ಮಟ್ಟಕ್ಕೆ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ, ಬಂಧು ಮಿತ್ರರ ಸಹಾಯ ಸಹಕಾರ ದೊರೆಯುತ್ತದೆ. ಸ್ಥಿರಾಸ್ತಿ ವಿವಾದಗಳನ್ನು ರಾಜಿ ಮಾಡಿಕೊಳ್ಳುತ್ತೀರಿ. ಉದ್ಯೋಗಿಗಳು ಸಹೋದ್ಯೋಗಿಗಳ ಸಹಾಯದಿಂದ ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ನೀಲಿ
ಕುಂಭ ರಾಶಿ
ಅಂದುಕೊಂಡ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುತ್ತೀರಿ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಹೆಚ್ಚು ಉತ್ಸಾಹದಿಂದ ಕೂಡಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ದೀರ್ಘಕಾಲದಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ನೇರಳೆ
ಮೀನ ರಾಶಿ
ಕುಟುಂಬ ಸದಸ್ಯರ ವರ್ತನೆ ಅಚ್ಚರಿ ಮೂಡಿಸುತ್ತದೆ. ಪ್ರಮುಖ ವ್ಯವಹಾರಗಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ದೀರ್ಘಾವಧಿಯ ಸಾಲದ ಒತ್ತಡ ಹೆಚ್ಚಾಗುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಪರಿಣಾಮ ಬೀರುತ್ತವೆ. ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಏರಿಳಿತಗಳು ಹೆಚ್ಚಾಗುತ್ತವೆ. ನೀರುದ್ಯೋಗಿಗಳಿಗೆ ನಿರಾಸೆ ಉಂಟಾಗುತ್ತದೆ.
ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಬಿಳಿ










