ಇಂದಿನ ರಾಶಿ ಭವಿಷ್ಯ ಅಕ್ಟೋಬರ್ 30-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ

ಮೇಷ ರಾಶಿ
ಬೆಲೆಬಾಳುವ ವಸ್ತ್ರ , ಆಭರಣಗಳನ್ನು ಖರೀದಿಸುತ್ತೀರಿ. ಆದಾಯ ಮಾರ್ಗಗಳು ಹೆಚ್ಚಾಗುತ್ತವೆ. ವೃತ್ತಿ ಮತ್ತು ಉದ್ಯೋಗ ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ. ಸುತ್ತಮುತ್ತಲಿನವರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಹೊಸ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

promotions

ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಹಳದಿ

promotions

ವೃಷಭ ರಾಶಿ 
ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳ ನಡುವೆಯೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತೀರಿ. ವ್ಯಾಪಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಲಾಭವನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ನಿವಾರಣೆಯಾಗುತ್ತವೆ. ಸಮಾಜ ಸೇವೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಹಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಬಿಳಿ

ಮಿಥುನ ರಾಶಿ 
ಕಠಿಣ ಪರಿಶ್ರಮದಿಂದ ದೂರ ಪ್ರದೇಶದ ಪ್ರಯಾಣಗಳನ್ನು ಮಾಡುತ್ತೀರಿ. ಪ್ರತಿಯೊಂದು ಸಣ್ಣ ವ್ಯವಹಾರಕ್ಕೂ ಬಹಳ ಸಮಯ ಕಾಯಬೇಕಾಗುತ್ತದೆ. ಆರ್ಥಿಕ ಒತ್ತಡ ಹೆಚ್ಚಾಗುತ್ತದೆ. ವೃತ್ತಿ,ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಒಳಗಾಗುತ್ತೀರಿ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಹೊಸ ಸಾಲಗಳನ್ನು ಮಾಡದಿರುವುದು ಉತ್ತಮ.

ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ

ಕಟಕ ರಾಶಿ 
ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಕುಟುಂಬ ಸದಸ್ಯರ ಸಹಕಾರದಿಂದ ನೀವು ಕೆಲವು ಸಮಸ್ಯೆಗಳಿಂದ ಹೊರಬರುತ್ತೀರಿ. ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆಹ್ವಾನಗಳು ದೊರೆಯುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗೂತ್ತದೆ. ವೃತ್ತಿ ಪರ ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯಾಪಾರದಲ್ಲಿ ಮಿಶ್ರಮ ಫಲ ಸಿಗುತ್ತದೆ.

ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ಕೆಂಪು

ಸಿಂಹ ರಾಶಿ 
ದೀರ್ಘಕಾಲದ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಬಂಧು ಮಿತ್ರರೊಂದಿಗಿನ ವಿವಾದಗಳು ದೂರವಾಗುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಅಡೆತಡೆಗಳು ಎದುರಾದರೂ ಆತ್ಮಸ್ಥೈರ್ಯದಿಂದ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಕೊಳ್ಳು/ಮಾರಾಟಗಳು ಲಾಭದಾಯಕವಾಗಿ ಸಾಗುತ್ತವೆ.

ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಕಿತ್ತಳೆ

ಕನ್ಯಾ ರಾಶಿ 
ಪ್ರಮುಖ ವಿಷಯಗಳಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ಉತ್ತಮ. ಸಂಗಾತಿಯ ವಿಷಯದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಕೈಗೊಂಡ ಕೆಲಸ ಸಕಾಲದಲ್ಲಿ ಪೂರ್ಣಗೊಳ್ಳದೆ ಮಾನಸಿಕ ಕಿರಿಕಿರಿಗಳು ಹೆಚ್ಚಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ.

ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು

ತುಲಾ ರಾಶಿ 
ಜೀವನ ಸಂಗಾತಿಯ ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು. ಪ್ರಯಾಣದಲ್ಲಿ ರಸ್ತೆ ಅಪಘಾತವಾಗುವ ಸೂಚನೆಗಳಿವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ಅಡೆತಡೆಗಳು ಉಂಟಾಗುತ್ತವೆ. ದೂರದಲ್ಲಿರುವ ಬಂಧುಗಳಿಂದ ಕೆಲವು ವಿಷಯಗಳು ತಿಳಿಡು ಬರುತ್ತವೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ.

ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಹಳದಿ

ವೃಶ್ಚಿಕ ರಾಶಿ
ಮಕ್ಕಳ ವಿದ್ಯಾಭ್ಯಾಸದ ವಿಷಯಗಳು ಅನುಕೂಲಕರವಾಗಿ ಸಾಗುತ್ತವೆ. ಎಲ್ಲಾ ಕ್ಷೇತ್ರಗಳಲ್ಲಿರುವವರಿಗೂ ತಕ್ಕ ಮನ್ನಣೆ ದೊರೆಯುತ್ತದೆ. ವೃತ್ತಿಪರ ಕೆಲಸಗಳಲ್ಲಿ ಸಹೋದ್ಯೋಗಿಗಳಿಂದ ಸಹಾಯ ಮತ್ತು ಸಹಕಾರಗಳು ದೊರೆಯುತ್ತದೆ. ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಸಿಗುತ್ತವೆ. ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಸಾಧಿಸುತ್ತೀರಿ.

ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ನೇರಳೆ

ಧನಸ್ಸು ರಾಶಿ 
ಸ್ನೇಹಿತರೊಂದಿಗೆ ಭೋಜನ, ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಹಠಾತ್ ಧನ ಲಾಭ ಉಂಟಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಬುದ್ಧಿವಂತಿಕೆಯಿಂದ ಎಲ್ಲರನ್ನೂ ನಿಮ್ಮ ಮಾತಿನ ಮೇಲೆ ನಿಲ್ಲುವಂತೆ ಮಾಡುತ್ತೀರಿ. ಮಾನಸಿಕವಾಗಿ ಹೆಚ್ಚು ಉತ್ಸುಕರಾಗಿರುತ್ತೀರಿ. ವ್ಯಾಪಾರದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು.

ಅದೃಷ್ಟದ ದಿಕ್ಕು:ಈಶಾನ್ಯ
ಅದೃಷ್ಟದ ಸಂಖ್ಯೆ:1
ಅದೃಷ್ಟದ ಬಣ್ಣ:ಕೆಂಪು

ಮಕರ ರಾಶಿ 
ಮಿತ್ರರೊಂದಿಗಿನ ವಿವಾದಗಳನ್ನು ಪರಿಹರಿಸಿಕೊಳ್ಳುತ್ತೀರಿ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ವೃತ್ತಿ ವ್ಯವಹಾರದಲ್ಲಿ ನಷ್ಟವನ್ನು ನಿವಾರಿಸುತ್ತೀರಿ. ಆರೋಗ್ಯದ ಕಡೆ ಹೆಚ್ಚಿನ ಗಮನವಿರಲಿ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:9
ಅದೃಷ್ಟದ ಬಣ್ಣ:ಹಳದಿ

ಕುಂಭ ರಾಶಿ 
ಮನೆಯಲ್ಲಿ ಅಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ. ಮಿತ್ರರಿಗೆ ಆರ್ಥಿಕ ನೆರವು ನೀಡುತ್ತೀರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ಸಾಹದಯಕ ವಾತಾವರಣ ಇರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೊಳಿಸಿ, ಲಾಭವನ್ನು ಪಡೆಯುತ್ತೀರಿ.

ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:5 
ಅದೃಷ್ಟದ ಬಣ್ಣ:ಕೆಂಪು

ಮೀನ ರಾಶಿ
ನಿರೀಕ್ಷೆಯಂತೆ ಯೋಜಿತ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವೌಲ್ಯದ ವಸ್ತು ಮತ್ತು ವಾಹನ ಸೌಕರ್ಯಗಳು ದೊರೆಯುತ್ತವೆ. ಬೆಲೆಬಾಳುವ ವಸ್ತುಗಳಿಗೆ ಹಣ ವ್ಯಯವಾಗುತ್ತದೆ. ಕೊಳ್ಳು, ಮಾರಾಟದಲ್ಲಿ ಲಾಭ ದೊರೆಯುತ್ತದೆ. ವ್ಯಾಪಾರ ವಹಿವಾಟಿನ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ಉದ್ಯೋಗ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ಬದಲಾಯಿಸಬೇಕು.

ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:2
ಅದೃಷ್ಟದ ಬಣ್ಣ:ಬಿಳಿ

Read More Articles