ಇಂದಿನ ರಾಶಿ ಭವಿಷ್ಯ ಸೆಪ್ಟಂಬರ್ 02-2023 ಶ್ರೀ ವಿವೇಕಾನಂದ ಆಚಾರ್ಯ ಅವರಿಂದ
- Prasad Kambar
- 11 Jan 2024 , 4:24 PM
- Belagavi
- 235
ಮೇಷ ರಾಶಿ
ಮನೆಯ ಹೊರಗೆ ಒತ್ತಡಗಳು ಹೆಚ್ಚಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ನೇತ್ರ ಮತ್ತು ಉದರ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವ್ಯಾಪಾರ-ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಉದ್ಯೋಗಗಳಲ್ಲಿ ಏರಿಳಿತಗಳು ಅಧಿಕವಾಗುತ್ತವೆ. ವ್ಯರ್ಥ ಖರ್ಚುಗಳ ಬಗ್ಗೆ ಜಾಗರೂಕತೆಯಿಂದ ವ್ಯವಹರಿಸಬೇಕು.

ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಳದಿ

ವೃಷಭ ರಾಶಿ
ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಸ್ನೇಹಿತರಿಂದ ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ನೀಲಿ
ಮಿಥುನ ರಾಶಿ
ಮನೆಯ ಹೊರಗೆ ಜನಪ್ರಿಯತೆ ಹೆಚ್ಚಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಹೊಸ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿಯನ್ನು ಸ್ವೀಕರಿಸುತ್ತೀರಿ. ವ್ಯಾಪಾರಗಳು ವಿಸ್ತರಿಸುತ್ತೀರಿ. ಸಮಾಜದಲ್ಲಿ ಹಿರಿಯರ ಪರಿಚಯಗಳಾಗುತ್ತವೆ. ಉದ್ಯೋಗಗಳಲ್ಲಿ ನಿರೀಕ್ಷಿತ ಸ್ಥಾನ ಚಲನೆಗಳಾಗುತ್ತವೆ. ನಿರುದ್ಯೋಗಿಗಳಿಗೆ ಪ್ರೋತ್ಸಾಹಕರ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:4
ಅದೃಷ್ಟದ ಬಣ್ಣ:ಹಸಿರು
ಕಟಕ ರಾಶಿ
ದೂರ ಪ್ರಯಾಣದ ಸೂಚನೆಗಳಿವೆ. ಮನೆಯಲ್ಲಿ ಕೆಲವರ ವರ್ತನೆಯಿಂದ ಮಾನಸಿಕ ಸಮಸ್ಯೆ ಉಂಟಾಗುತ್ತದೆ. ಬಂಧುಗಳೊಂದಿಗೆ ಮಾತಿನ ಸಂವಾದ ನಡೆಯುತ್ತದೆ . ಹಣಕಾಸಿನ ತೊಂದರೆಗಳು ಕಾಡುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ವ್ಯಾಪಾರಗಳು ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:5
ಅದೃಷ್ಟದ ಬಣ್ಣ:ನೀಲಿ
ಸಿಂಹ ರಾಶಿ
ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಪ್ರಯಾಣಗಳನ್ನು ಮಾಡಬೇಕಾತ್ತದೆ. ದೀರ್ಘಾವಧಿಯ ಸಾಲದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ಪಶ್ಚಿಮ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ಹಳದಿ
ಕನ್ಯಾ ರಾಶಿ
ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅಗತ್ಯಕ್ಕೆ ಸ್ನೇಹಿತರಿಂದ ಸಹಾಯ ದೊರೆಯುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಉತ್ಸಾಹದಯಕ ವಾತಾವರಣವಿರುತ್ತದೆ. ಹೊಸ ವ್ಯಕ್ತಿಗಳೊಂದಿಗೆ ಪರಿಚಯಗಳಾಗುತ್ತವೆ. ಆತ್ಮೀಯರಿಂದ ಒಳ್ಳೆಯ ಸುದ್ದಿ ತಿಳಿದು ಬರುತ್ತದೆ. ಸಣ್ಣ ಪ್ರಮಾಣ ಕೈಗಾರಿಕೆಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ
ತುಲಾ ರಾಶಿ
ಬಾಲ್ಯದ ಗೆಳೆಯರ ಭೇಟಿ ಸಂತಸ ತರುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಸಂದರ್ಶನಗಳು ದೊರೆಯುತ್ತವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಿ ಲಾಭವನ್ನು ಪಡೆಯಲಾಗುತ್ತದೆ. ಉದ್ಯೋಗಗಳಿಗೆ ಅನುಕೂಲಕರ ವಾತಾವರಣವಿರುತ್ತದೆ.
ಅದೃಷ್ಟದ ದಿಕ್ಕು:ವಾಯುವ್ಯ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೀಲಿ
ವೃಶ್ಚಿಕ ರಾಶಿ
ಪ್ರಮುಖ ವ್ಯವಹಾರಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಕಂಡು ಬರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ಆಸ್ತಿ ವಿವಾದಗಳಿರುತ್ತವೆ . ವ್ಯಾಪಾರವು ನಿರಾಶಾದಾಯಕವಾಗಿರುತ್ತದೆ. ಬಂಧುಮಿತ್ರರೊಡನೆ ವಿವಾದಗಳು ಉಂಟಾಗುತ್ತವೆ. ಧನ ವ್ಯಯದ ಸೂಚನೆಗಳಿವೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಸಮಸ್ಯೆಗಳು ಎದುರಾಗುತ್ತವೆ.
ಅದೃಷ್ಟದ ದಿಕ್ಕು:ಪೂರ್ವ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಹಸಿರು
ಧನಸ್ಸು ರಾಶಿ
ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅನಾರೋಗ್ಯದ ಸೂಚನೆಗಳಿವೆ. ಸ್ಥಿರಾಸ್ತಿ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ಆರ್ಥಿಕ ಸಮಸ್ಯೆಗಳು ಎದುರಾಗುತ್ತವೆ. ಪ್ರಮುಖ ಕೆಲಸಗಳು ಹೆಚ್ಚಿನ ಪ್ರಯತ್ನದಿಂದಲೂ ಪೂರ್ಣಗೊಳ್ಳುವುದಿಲ್ಲ. ವ್ಯಾಪಾರ ಮತ್ತು ಉದ್ಯೋಗಗಳು ಮಂದಗತಿಯಲ್ಲಿ ಸಾಗುತ್ತವೆ. ಸಂಬಂಧಿಕರೊಂದಿಗೆ ಸಣ್ಣ-ಪುಟ್ಟ ವಿವಾದಗಳು ಉಂಟಾಗುತ್ತವೆ.
ಅದೃಷ್ಟದ ದಿಕ್ಕು:ಉತ್ತರ
ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ನೇರಳೆ
ಮಕರ ರಾಶಿ
ಕುಟುಂಬ ಸದಸ್ಯರೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ಆಪ್ತ ಸ್ನೇಹಿತರಿಂದ ಅಮೂಲ್ಯ ಮಾಹಿತಿ ಸಿಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಆಶಾದಾಯಕವಾಗಿರುತ್ತವೆ.
ಅದೃಷ್ಟದ ದಿಕ್ಕು:ನೈಋತ್ಯ
ಅದೃಷ್ಟದ ಸಂಖ್ಯೆ:6
ಅದೃಷ್ಟದ ಬಣ್ಣ:ಕೆಂಪು
ಕುಂಭ ರಾಶಿ
ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತವೆ. ನೇತ್ರ ಸಂಬಂಧಿ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ, ಪ್ರಯಾಣದಲ್ಲಿ ಸ್ವಲ್ಪ ಬದಲಾವಣೆಗಳು ಕಂಡುಬರುತ್ತವೆ. ಬಾಲ್ಯ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ. ಕೈಗೊಂಡ ಕೆಲಸಗಳಲ್ಲಿ ಮತ್ತಷ್ಟು ಶ್ರಮ ಹೆಚ್ಚಾಗುತ್ತದೆ.
ಅದೃಷ್ಟದ ದಿಕ್ಕು:ದಕ್ಷಿಣ
ಅದೃಷ್ಟದ ಸಂಖ್ಯೆ:7
ಅದೃಷ್ಟದ ಬಣ್ಣ:ನೀಲಿ
ಮೀನ ರಾಶಿ
ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ವ್ಯವಹಾರಗಳಲ್ಲಿ ಸಕಾಲಕ್ಕೆಹೊಸ ಹೂಡಿಕೆಗಳು ದೊರೆಯುತ್ತವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಕೆಲವು ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ.
ಅದೃಷ್ಟದ ದಿಕ್ಕು:ಆಗ್ನೇಯ
ಅದೃಷ್ಟದ ಸಂಖ್ಯೆ:8
ಅದೃಷ್ಟದ ಬಣ್ಣ:ನೀಲಿ










