ನಾಳೆ ರಾಜ್ಯ ಸರ್ಕಾರಕ್ಕೆ ವರುಷ, ಬಿಜೆಪಿಯಿಂದ ಪ್ರತಿಭಟನೆಗೆ ಕರೆ
- shivaraj bandigi
- 19 May 2024 , 2:20 PM
- Bengaluru
- 484
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಲಿದೆ. ಆದರೆ ಸಿದ್ದರಾಮಯ್ಯ ಸರ್ಕಾರದ ಒಂದು ವರ್ಷದ ಸಂಭ್ರಮಾಚರಣೆ ಮಾಡುವುದಕ್ಕೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಹೀಗಾಗಿ ನೀತಿ ಸಂಹಿತೆ ಬಳಿಕ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಿಸಲಾಗಿದೆ. ನಾಳೆ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಸರ್ಕಾರದ 1 ವರ್ಷದ ಕಾರ್ಯವೈಖರಿ ಬಗ್ಗೆ ತಿಳಿಸಲಿದ್ದಾರೆ. ಮತ್ತೊಂದೆಡೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ.












