ಮಾಜಿ ಮುಖ್ಯ ಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರ್ ಟ್ವೀಟ್ ಕಾಳಗ : ಲೆಟ್ಸ್ ಎಂಜಾಯ್ ಎಂದ್ ವಿರೋದ ಪಕ್ಷ

ಬೆಂಗಳೂರು ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ್ ಮತ್ತು ಮಾಜಿ ಮುಖ್ಯ ಮಂತ್ರಿ ಎಚಡಿ ಕುಮಾರಸ್ವಾಮಿ ನಡುವೆ ಟ್ವಿಟ್ ಸಮರ್ ಉಂಟಾಗಿದ್ದು ಒಬ್ಬರ ಮೇಲೊಬ್ಬರು ಕೆಸರು ಎರಚಾಡುವಂತೆ ಕಾಣುತ್ತಿದೆ .

ಸುಳ್ಳು ದಾಖಲೆ ಸೃಷ್ಟಿಯ ಶೂರ" ನನ್ನ ಮೇಲೆ ವಿನಾಕಾರಣ ಆರೋಪ ಮಾಡುವ ಬದಲು ಸಾಕ್ಷಿ ಇದ್ದರೆ ಬಹಿರಂಗಪಡಿಸಲಿ.
ಗಾಳಿಯಲ್ಲಿ ಗುಂಡು ಹಾರಿಸುವುದು, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದು, ಹಿಟ್ & ರನ್ ಮಾಡಿ ಸಿಕ್ಕಿ ಬೀಳ್ತೀನಿ ಅಂದಾಗ ಕಣ್ಣೀರು ಹಾಕಿ ಗಮನ ಸೆಳೆಯೋ ಕಣ್ಣೀರ್ ಸ್ವಾಮಿ! ಇದೇ ನಿಮ್ಮ ಪಕ್ಷದ ಸಿದ್ಧಾಂತವೇ ಎಂದು ಅಶ್ವಥ್ ನಾರಾಯಣ್ ಪ್ರಶ್ನಿಸಿದ್ದಾರೆ.

promotions

2 ಬಾರಿ ಮುಖ್ಯಮಂತ್ರಿ ಆದಾಗ ತಾವು ರಾಮನಗರಕ್ಕೆ ಏನು ಕೊಡುಗೆ ನೀಡಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ.
ನನ್ನ ದಾಖಲೆ ಬಿಚ್ಚಿಡಲಾ ಕೇಳುತ್ತಿದ್ದೀರಿ! ಏನೇನು ಬಿಚ್ಚುತ್ತೀರೋ ಬಿಚ್ಚಿ, ಅದೇನು ನಕಲಿ ಸರ್ಟಿಫಿಕೇಟ್‌ ಎಂದು ಬಾಯಿಬಿಡಿ.
ಈ ಬಹಿರಂಗ ಸವಾಲನ್ನು ಸ್ವೀಕರಿಸುವಿರೋ ಅಥವಾ ಉತ್ತರ ಕುಮಾರನಂತೆ ಅಡಗಿ ಕೂರುವಿರೋ?
ಗೆದ್ದಿದ್ದು ಮೂರು ಮತ್ತೊಂದು ಸೀಟ್‌ ಆದರೂ ಗೆದ್ದಲು ಕಟ್ಟಿದ ಹುತ್ತದಲ್ಲಿ ಸೇರಿಕೊಂಡ ಹಾವಿನಂತೆ ಕಳ್ಳದಾರಿಯಲ್ಲಿ ಸಿಎಂ ಆದದ್ದು ಯಾರು?

promotions

ಅಧಿಕಾರ ದುರ್ಬಳಕೆ ಮಾಡಿಕೊಂಡು ಆದಿ ಚುಂಚನಗಿರಿ ಶ್ರೀಗಳ ಫೋನ್‌ ಕದ್ದಾಲಿಕೆ ಮಾಡಿದ ಕುಮಾರಸ್ವಾಮಿ ಅವರನ್ನು ಎಲ್ಲಿದ್ದೀರಿ ಎಂದು ಕೇಳಿದರೆ ವಿಷ ಸರ್ಪದಂತೆ ಬುಸುಗುಡುವುದೇಕೆ?

ಕುಟುಂಬ ರಾಜಕಾರಣ ಮಾಡಬೇಡಿ ಎಂದರೆ ಮೈಮೇಲೆ ಬಂದವರಂತೆ ವರ್ತಿಸುವುದೇಕೆ? ಹೋದಲ್ಲೆಲ್ಲಾ ಕಣ್ಣೀರು ಸುರಿಸುವ ನಾಟಕವೇಕೆ? ಅಧಿಕಾರ ಸಿಗದಿದ್ದರೆ ಸಾಯುತ್ತೇನೆಂಬ ಮಾತೇಕೆ?

ಬ್ಲ್ಯಾಕ್‌ಮೇಲ್‌ಕುಮಾರಸ್ವಾಮಿ ಅವರ ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? ಸಾಮಾನ್ಯ ಕಾರ್ಯಕರ್ತರಿಗೆ ಅಧಿಕಾರ ನೀಡುವ ಧೈರ್ಯ ಇದೆಯೇ ..? ಎಂದು ಟ್ವಿಟ್ ಮಾಡಿದ್ದಾರೆ .

ಅಶ್ವಥನಾರಾಯಣರವರ ಸರಣಿ ಟ್ವಿಟಗಳ ಸಾಲಮಾಲೆ ನೋಡಿ ಎಚಡಿಕೆ ತಮ್ಮ್ ಬತ್ತಳಿಕೆಯಲ್ಲಿನ ಅಸ್ತ್ರಗಳನ್ನು ಉಪಯೋಗಿಸಿದ್ದಾರೆ.

ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ. ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ. ನನ್ನ ಶಕ್ತಿ ಏನೆಂಬುದು ನಿಮಗೆ, ನಿಮ್ಮ ಪಕ್ಷಕ್ಕೆ ಚೆನ್ನಾಗಿ ಗೊತ್ತು. ಈಗಲೂ ಸವಾಲು ಹಾಕುತ್ತಿದ್ದೇನೆ. ಕಲಾಪ ಕರೆದು ನೋಡಿ, ನಿಮ್ಮದೆಲ್ಲ ಬಿಚ್ಚಿಡುತ್ತೇನೆ. ಅನುಮಾನವೇ ಬೇಡ ಎಂದು ಕುಮಾರಸ್ವಾಮಿ ಸಿಡಿದಿದ್ದಾರೆ .

ಯಾರು? ಎಲ್ಲಿ? ಹೇಗೆ? ಫೈಲ್ಯೂರ್ ಆಗಿದ್ದಾರೆ ಎನ್ನುವುದು ನನಗೂ ಗೊತ್ತು. ಕಳೆದ 3 ವರ್ಷದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯುತ್ತಾ ಓತಲಾ ಹೊಡೆದವರು ಯಾರು? ಮುಕ್ಕಿಮುಕ್ಕಿ ಲೂಟಿ ಹೊಡೆದವರು ಯಾರು? ಎನ್ನುವುದು ನನಗಿಂತ ನಿಮಗೆ ಚೆನ್ನಾಗಿ ಗೊತ್ತಿರಬೇಕಲ್ಲವೇ?

ಮಲ್ಲೇಶ್ವರದಲ್ಲಿ ನೀವು ನಡೆಸಿರುವ ಕರ್ಮಕಾಂಡವನ್ನು ಬಿಚ್ಚಿಡುತ್ತೇನೆ. ಕಲಾಪ ನಡೆಸಿ ನೋಡಿ. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎನ್ನುವಂತೆ ಮಲ್ಲೇಶ್ವರದಲ್ಲಿ ನಿಮ್ಮ ಸದಾರಮೆ ಶೋಕಿ ಎಂಥದು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತಾಗಿದೆ.

ನಾನು ಕಲಾಪ ನಡೆಸಿ ಎಂದಷ್ಟೇ ಕೇಳಿದೆ,ನಾನು ನಿಮ್ಮ ಹೆಸರೆತ್ತಲಿಲ್ಲ,ನಿಮಗೆ ಗೊತ್ತಿರಲಿ. ಆದರೆ, ನಿಮಗ್ಯಾಕೆ ಸಿಟ್ಟು ಬಂತೋ ನಾ ಕಾಣೆ. ಪಿಎಸ್ಐ ಅಕ್ರಮ, ಪ್ರಾಧ್ಯಾಪಕರ ನೇಮಕ ಅಕ್ರಮ, ಬಿಲ್ಲುಗಳ ಭಾಗವತ, ಮಹಾ ಡೀಲುಗಳ ಬಗ್ಗೆ ಚರ್ಚೆ ಮಾಡೋಣ. ನಾನು ತಯಾರಿದ್ದೇನೆ ಕಲಾಪ ಕರೆಯಿರಿ ಎಂದು ಓಪನ್ ಚಾಲೆಂಜ್ ಮಾಡಿದ್ದಾರೆ .

Read More Articles