
ಆಸ್ತಿ ವಿಚಾರಕ್ಕೆ ಚಿಕ್ಕಪ್ಪನ ಕೊಲೆ;ಮಣ್ಣಿಗಾಗಿ ಮಾರಣಹೋಮ
- shivaraj bandigi
- 10 May 2024 , 8:52 AM
- Belagavi
- 487
ಅಥಣಿ : ಆಸ್ತಿ ವಿಚಾರವಾಗಿ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ ಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರವಲಯದಲ್ಲಿ ಕೊಲೆ ನಡೆದಿದ್ದು ದಬದಬಹಟ್ಟಿ ಗ್ರಾಮದ ಕೇಶವ ಬೊಸಲೆ (47) ಕೊಲೆಯಾದ ದುರ್ದೈವಿಯಾಗಿದ್ದಾನೆ.

ಖಂಡೊಬಾ ಬೊಸಲೆ (27) ಕೊಲೆ ಮಾಡಿದ ವ್ಯಕ್ತಿ

ಆರೋಪಿ ಹಾಗೂ ಕೊಲೆಯಾದ ದುರ್ದೈವಿ ದಬದಬಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಕಳೆದ 10ವರ್ಷಗಳಿಂದ ಜಮೀನಿನ ಸಲುವಾಗಿ ಚಿಕ್ಕಪ್ಪ ಹಾಗೂ ಮಗನ ಜೊತೆ ಜಗಳ ನಡೆಯುತ್ತಲೆ ಇತ್ತು
ನಿನ್ನೆ ಇಬ್ಬರು ದಾಯಾದಿಗಳು ಕೂಡಿ ಕೊಕಟನೂರ ಹೊರವಲಯದಲ್ಲಿ ಮದ್ಯ ಸೇವನೆ ಮಾಡಿದ್ದಾರೆ
ನಿನ್ನೆ ಮದ್ಯ ಸೇವನೆ ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ರಾಹುಲ್ ಮಾದರ