ಮೋದಿ ಜನ್ಮ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮ
- 15 Jan 2024 , 12:29 AM
- Belagavi
- 154
ಬೆಳಗಾವಿ:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸೆ.17 ರಿಂದ ಅ.2ರ ವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಹೇಳಿದರು.

ಬುಧವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ 8 ವರ್ಷದ ಅವಧಿಯಲ್ಲಿ ಭಾರತದಲ್ಲಿ ಅಭಿವೃದ್ಧಿ ಪರ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶ, ವಿದೇಶದಲ್ಲಿ ಭಾರತದ ಹಿರಿಮೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ ಎಂದರು.
ರಾಜ್ಯ ಯುವ ಮೋರ್ಚಾದಿಂದ ರಕ್ತಧಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಕೃತಕ ಕೈ, ಕಾಲು ಜೋಡಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಬಿಜೆಪಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.










