ಕೋವಿಡ್-19 ಚಿಲ್ಲರೆ ವಹಿವಾಟು ಗಳಿಗೆ ಕಡಿವಾಣ ಹಾಕಿದ ಎ ಪಿ ಎಂ ಸಿ
ಬೆಳಗಾವಿ:ಕೋವಿಡ್-19 ಸಾಕ್ರಾಮಿಕ ರೋಗದ 2ನೇ ಅಲೆ ಹರಡುವುದನ್ನು ತಡೆಗಟ್ಟಲು ಸಗಟು ತರಕಾರಿ ಮಾರುಕಟ್ಟೆಯನ್ನು ಸೀಲ್ ಮಾಡಲಾಗಿದೆ ಮತ್ತು ವಹಿವಾಟನ್ನು ಪ್ರಾಂಗಣದ ಖಾಲಿ ಇರುವ ಗೆಣಸು ಹಾಗೂ ಭಾನುವಾರ ಮಾರುಕಟ್ಟೆಗಳಿಗೆ ಸ್ಥಳಾಂತರಿಸಿದ್ದು, ಎಲ್ಲಾ ಅಧಿಕೃತ ವ್ಯಾಪಾರಸ್ಥರಿಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ವ್ಯಾಪಾರಸ್ಥರ ಮನವಿ ಮೇರೆಗೆ ವಹಿವಾಟಿನ ವೇಳೆಯನ್ನು ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಬದಲಾಯಿಸಲಾಗಿದೆ. ಚಿಲ್ಲರೆ ವಹಿವಾಟನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ದ್ವಿಚಕ್ರ ವಾಹನಗಳ ಮತ್ತು ಆಟೋರಿಕ್ಷಾಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಚಿಲ್ಲರೆ ವರ್ತಕರು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಿ ಪ್ರವೇಶ ಮಾಡಬೇಕು. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆ 2005, ಐಪಿಸಿ ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರನ್ವಯ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.