Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹುಕ್ಕೇರಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ: ಜೀರಲಿ

localview news

ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ನಡುವೆ ಹುಕ್ಕೇರಿಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಅದನ್ನು ಜಿಲ್ಲಾಡಳಿತದ ಗಮನಕ್ಕೆ ‌ತರಲಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ವಿರೋಧ ಪಕ್ಷ ಹಾಗೂ ಕೆಲ ಸಮಾಜಘಾತುಕ ಶಕ್ತಿಗಳು ಕೊರೋನಾ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಭಯ ಬಿಳಿಸುವ ಕಾರ್ಯ ಮಾಡುತ್ತಿವೆ. ಇದರಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಿತ್ತೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟರು ಆದರೆ ಅವರು ರೆಮಡಿಸಿವರ್ ಸಿಗದೆ ಮೃತಪಟ್ಟಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದರಿಂದ ಜನರಿಗೆ ಭಯ ಹುಟ್ಟಿಸುವ ಹಾಗೆ ಆಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಶಾಸಕರು, ಸಚಿವರು ಹಾಗೂ ಮಂಡಲದ ಕಾರ್ಯಕರ್ತರು ಕೋವಿಡ್ ನಿಯಂತ್ರಣ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ. ಅಲ್ಲದೆ ಸ್ಥಳೀಯ ಶಾಸಕರು ಆಕ್ಸಿಜನ್ ಹಾಗೂ ರೆಮಡಿಸಿವರ್ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು. ಬೆಳಗಾವಿ ನಗರದಲ್ಲಿ ಇಬ್ಬರು ಶಾಸಕರು ನಗರದ ಜನರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಅಂಬುಲೆನ್ಸ್ ನೀಡಿದ್ದಾರೆ.

ಅಲ್ಲದೆ ಗ್ರಾಮೀಣ ಭಾಗದಲ್ಲಿಯೂ ಎರಡು ಅಂಬುಲೆನ್ಸ್ ನೀಡಲಾಗಿದೆ ಎಂದು ಹೇಳಿದರು. ರಾಮದುರ್ಗ, ಅರಬಾವಿ ಹಾಗೂ‌ ಗೋಕಾಕ ತಾಲೂಕಿನಲ್ಲಿ ಬಿಜೆಪಿ ವತಿಯಿಂದ ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಮಾಡಲಾಗಿದೆ ಎಂದು ಹೇಳಿದರು. ಇತ್ತೀಚೆಗೆ ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರ ಮಗ ಮೃತಪಟ್ಟರು.

ಕೊರೋನಾ ಸೋಂಕಿನ ಎರಡನೇ ಅಲೆಗೆ ಅತೀ‌ ಹೆಚ್ಚು ಯುವಕರು ಬಲಿಯಾಗುತ್ತಿರುವುದು ದುರ್ದೈವದ ಸಂಗತಿ. ಮನುಷ್ಯ ದೈರ್ಯ ಕಳೆದುಕೊಳ್ಳುತ್ತಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಭಯ ಪಡಿಸುವ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ‌.ಇದು ಸರಿಯಲ್ಲ. ಸಕಾರಾತ್ಮಕವಾದ ವಿಷಯವನ್ನು ಬಿತ್ತರಿಸುವ ಅಗತ್ಯ ಇದೆ ಎಂದು ಹೇಳಿದರು. 

ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ, ಬಿಜೆಪಿ ನಗರಾಧ್ಯಕ್ಷ ಶಶಿ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.