ರಾಜ್ಯದಲ್ಲಿ ಇಂದು ಸಹ ಮಳೆ ಮುಂದುವರಿಕೆ; ಹವಾಮಾನ ಇಲಾಖೆ
ಬೆಂಗಳೂರು : ಕಳೆದ ಕೆಲ ದಿನಗಳಿಂದ ತೌಕ್ತೆ ಚಂಡಮಾರುತದ ಪರಿಣಾಮದಿಂದ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದೂ ಸಹ ರಾಜ್ಯ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿರಂತರ ಹವಾಮಾನ ವರಿದಿಗಾಗಿ ಕ್ಲಿಕ್ ಮಾಡಿಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ಹಾವೇರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮೇ.19 ರಿಂದ ಮೇ.21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.