ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಪೃಥ್ವಿ ಸಿಂಗ್ ಫೌಂಡೇಶನ್
ಬೆಳಗಾವಿ: ಪೃಥ್ವಿ ಸಿಂಗ್ ಮಾತನಾಡಿ, ಪೃಥ್ವಿ ಸಿಂಗ್ ಫೌಂಡೇಶನ್ ವತಿಯಿಂದ ನಗರದಲ್ಲಿರುವ ಜನರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಕೊರೋನಾ ವಾರಿಯರ್ಸ್ ಗಳು ಮನೆ ಮನೆಗೆ ಹೋಗಿ ತಮ್ಮ ಜೀವದ ಹಂಗನ್ನು ತೊರೆದು ಸೋಂಕಿತರ ಆರೈಕೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ನೀಡುವ ಉದ್ದೇಶದಿಂದ ಅವರಿಗೆ ಸ್ಯಾನಿಟೈಸರ್, ಮಾಸ್ಕ, ಆಹಾರದ ಪೊಟ್ಟಣ ವಿತರಿಸಲಾಗಿದೆ ಎಂದರು.