ಕೇಂದ್ರದ ಮಾಜಿ ಸಚಿವ ಶ್ರೀ ಬಾಬುಗೌಡ ಪಾಟೀಲ್ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಶ್ರೀ ಬಾಬುಗೌಡ ಪಾಟೀಲ್ ಅವರ ನಿಧನಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ.
ಒಂದು ಕಾಲದಲ್ಲಿ ಕರ್ನಾಟಕದ ದೊಡ್ಡ ರೈತ ನಾಯಕರಾಗಿ ಗುರುತಿಸಿಕೊಂಡಿದ್ದ ಬಾಬಾಗೌಡ ಪಾಟೀಲ್ ಅವರ ಹಠಾತ್ ನಿಧನ ರೈತ ಸಮುದಾಯದಕ್ಕೆ ದೊಡ್ಡ ಹಿನ್ನಡೆ ಎಂದು ಕಂಬನಿ ಮಿಡಿದಿದ್ದಾರೆ. ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಗಮನ ಸೆಳೆದಿದ್ದರು.
ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ವಾಜಪೇಯಿ ಸಂಪುಟ ದರ್ಜೆ ಸಚಿವರಾಗಿ ಗೆದ್ದಿದ್ದರು. ರೈತ ಹೋರಾಟದಿಂದ ಪ್ರಬಲ ನಾಯಕರಾಗಿ ಬೆಳೆದ ಬಾಬಾಗೌಡ ಪಾಟೀಲ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.
ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಿ, ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಿರಾಣಿ ಅವರು ಪ್ರಾಥಿ೯ಸಿದ್ದಾರೆ.