Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬಾಬಾಗೌಡ ಪಾಟೀಲ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

localview news

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಬಾಗೌಡ ಪಾಟೀಲ್ ಅವರು ರೈತ ಶಕ್ತಿಯನ್ನು ರಾಜ್ಯದ ಜನತೆಗೆ ಪರಿಚಯಿಸಿದವರು. ಕಿತ್ತೂರು ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರಗಳಿಂದ ಏಕಕಾಲಕ್ಕೆ ಗೆದ್ದ ಕೀರ್ತಿ ಬಾಬಾ ಗೌಡ ಪಾಟೀಲ್ ಅವರದು. ನಂತರ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಪಾಟಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿದ್ದರು.

ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ನಿಧನದ ದುಃಖವನ್ನು ಶಕ್ತಿಯನ್ನು ಅವರ ಕುಟುಂಬಕ್ಕೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.