ಜನರ ನಿಯಂತ್ರಣ ಮಾಡಲು ಪೊಲೀಸರಿಗೆ ಸೂಚಿಸಿದ್ದೇನೆ: ಸಚಿವ ಬೊಮ್ಮಾಯಿ
ಹಾವೇರಿ :ಕೊರೋನಾ ನಿಯಂತ್ರಣ ಮಾಡಲು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ ಅದರಂತೆ ಪೊಲೀಸರು ಸಹಕಾರ ನೀಡಬೇಕೆಂದು ತಿಳಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಶನಿವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮಾಡಲು ಆಯಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.
ಜಿಲ್ಲೆಯ ಜನರನ್ನು ನಿಯಂತ್ರಣ ಮಾಡಲು ಪೊಲೀಸರಿಗೆ ಸಿಎಂ ಸಂಪೂರ್ಣ ಅಧಿಕಾರ ನೀಡಿದ್ದಾರೆ. ನಾನು ಸಹ ಪೊಲೀಸರಿಗೆ ಸಾರ್ವಜನಿಕರಿಗೆ ನಿಯಂತ್ರಣ ತರಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.