ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ದೊರೆಸ್ವಾಮಿ ಅವರ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ
ಬೆಂಗಳೂರು: ಶತಾಯುಷಿ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅವರ ಹಠಾತ್ ನಿಧನಕ್ಕೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.
ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರೇರಣೆಯಿಂದ ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೊರೆಸ್ವಾಮಿ ಅವರ ನಿಧನ ಕರ್ನಾಟಕಕ್ಕೆ ಮಾತ್ರವಲ್ಲ, ದೇಶಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.
ದೊರೆಸ್ವಾಮಿ ಅವರು ಯಾವುದೇ ಯುವ ಜೀವಗಳನ್ನು ನಾಚಿಸುವಂತೆ, ಬೇರೆ ಬೇರೆ ಸಾಮಾಜಿಕ ಚಳವಳಿಗಳಲ್ಲಿ ಇನ್ನೂ ತೊಡಗಿಸಿಕೊಂಡಿದ್ದರು . ಭೂಮಿಗಾಗಿ, ಆದಿವಾಸಿಗಳಿಗಾಗಿ ಸದಾ ಮಿಡಿಯುತ್ತಾ, ಎಲ್ಲ ಹೋರಾಟಗಳಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ಸ್ಮರಿಸಿದ್ದಾರೆ.
ಭೂ ದಾನ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ ಮಾತೃಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದ ವಿವಿಧ ಚಳವಳಿಗಳಲ್ಲಿ ಇವರು ಗುರುತಿಸಿಕೊಂಡಿದ್ದರು. ಆದುದರಿಂದಲೇ, ದೊರೆಸ್ವಾಮಿಯವರ ಹೋರಾಟವನ್ನು ಸ್ವಾತಂತ್ರ ಪೂರ್ವ ಮತ್ತು ಆನಂತರ ಎಂದು ಕರೆಯುತ್ತಿದ್ದರು ಎಂದು ಹೇಳಿದ್ದಾರೆ
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಅವರ ನಿಧನನಿಂದ ದೇಶದಲ್ಲಿ ಹಿರಿಯ ಚೇತನದ ಯುಗಾಂತ್ತ ಕೊನೆಗೊಂಡಿದೆ ಎಂದು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಿ,ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನಿರಾಣಿ ಅವರು ತಮ್ಮ ಶೋಕಾ ಸಂದೇಶದಲ್ಲಿ ಪ್ರಾಥಿ೯ಸಿದ್ದಾರೆ.