Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕೃಷಿ ಮಸೂದೆ ವಿರೋಧಿಸಿ ಕರ ಪತ್ರಕ್ಕೆ ಬೆಂಕಿ ಹಚ್ಚಿದ ರೈತರು

localview news

ಬೆಳಗಾವಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಜಾರಿಗೆ ತಂದಿರುವ ಕೃಷಿ ಮಸೂದೆ ಕಾಯ್ದೆ ಸೇರಿದಂತೆ ರೈತರ ಸಮಸ್ಯೆಯನ್ನು ಬಗೆ ಹರಿಸುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಶನಿವಾರ ರೈತ ಸಂಘಟನೆಯ ಮುಖಂಡರು ಕೇಂದ್ರ ಸರಕಾರ ಕರ ಪತ್ರವನ್ನು ಸುಟ್ಟು ಪ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ, ರಾಜ್ಯ ಸರಕಾರಗಳು ರೈತರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ದೇಶದಲ್ಲಿ ರಣಕೇಕೆ ಹಾಕುತ್ತಿರುವ ಕೊರೋನಾ ಸೋಂಕು ನಿಯಂತ್ರಣ ಮಾಡುವಲ್ಲಿ ಸರಕಾರ ಎಡವಿದೆ. ಸರಿಯಾಗಿ ಯಾರಿಗೂ ವ್ಯಾಕ್ಸಿನ್ ಸಿಗುತ್ತಿಲ್ಲ. ಕೊರೋನಾ ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕೆಂದು ದೆಹಲಿಯಲ್ಲಿ ರೈತರು ಕಳೆದ ಆರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿವೆ. ಮೋದಿ ಸರಕಾರ ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆಯಲು ಹಿಂದೆಟ್ಟು ಹಾಕುತ್ತಿರುವುದು ದುರ್ದೈವದ ಸಂಗತಿ ಎಂದು ಅಸಮಾಧಾನ ಹೊರ ಹಾಕಿದರು.

ರೈತ ಮುಖಂಡರಾದ ಚುನ್ನಪ್ಪ ಪೂಜಾರಿ, ರಾಘವೇಂದ್ರ ನಾಯಕ, ಸಿದ್ದಗೌಡ ಮೋದಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.