Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಖ್ಯಾತ ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಶ್ರವಣಬೆಳಗೊಳ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಸಂತಾಪ

localview news

ಶ್ರವಣಬೆಳಗೊಳ: ನಾಡಿನ ಖ್ಯಾತ ಸಾಹಿತಿಗಳಾದ ಡಾ|| ಸಿದ್ಧಲಿಂಗಯ್ಯರವರು ನಿಧನರಾದ ವಿಷಯ ತಿಳಿದು ಅತೀವ ಸಂತಾಪವಾಯಿತು. ಶ್ರೀಯುತರ ನಿಧನದ ಸುದ್ದಿ ನಿಜಕ್ಕೂ ಆಘಾತ ತಂದಿದೆ ಎಂದು ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಹೇಳಿದರು.

2015ರಲ್ಲಿ ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು, ಇದೊಂದು ಕನ್ನಡದ ಐತಿಹಾಸಿಕ ಸಮ್ಮೇಳನವಾಯಿತು. ಅವರ ಜೊತೆ ನಡೆದ ಸಂವಾದ ಸದಾ ಸ್ಮರಣೀಯವಾಗಿರುತ್ತದೆ.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ಅವರಿಗೆ ಸದ್ಗತಿ ಹಾಗೂ ಮುಂದೆ ಮೋಕ್ಷ ಪ್ರಾಪ್ತಿಯಾಗಲೆಂದು ಪ್ರಾರ್ಥನೆ. ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಭಗವಾನ್ ಶ್ರೀ ಶ್ರೀ ಶ್ರೀ ಬಾಹುಬಲಿ ಸ್ವಾಮಿಯವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.