ಹುಲಿಯನ್ನು ಜೀವಿತಾವಧಿ ದತ್ತು ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ : ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.
On the occasion of my nephew Harsha's (Harshit) birthday, I have adopted a tiger named Sourya from Kittur Rani Channamma Mini Zoo and contributed Rs. 1 lakh for the maintenance of the tiger for one year and every year on 14th of June I'm going to contribute Rs. 1 lakh towards 1/2 pic.twitter.com/HAvOxKTAmR
— Laxmi Hebbalkar (@laxmi_hebbalkar) June 14, 2021
ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿರುವ ಲಕ್ಷ್ಮಿ ಹೆಬ್ಬಾಳಕರ್, ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು. ಈ ಹುಲಿಯ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದು, ಇದರ ಜೀವಿತಾವಧಿಯವರೆಗೆ ಇದರ ಆರೈಕೆಯು ನನ್ನ ಮೇಲಿರುತ್ತದೆ. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇವತ್ತು ಅತೀ ಸಂತೋಷದಿಂದ ಈ ಶೌರ್ಯ ಹುಲಿಯನ್ನು ದತ್ತು ಪಡೆದಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. . ಇದರ ಆರೈಕೆಯ ಸಲುವಾಗಿ ಪ್ರಾರಂಭದಲ್ಲಿ ಒಂದು ಲಕ್ಷ ರೂ,ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ಎಡೆ ಮಾಡಿಕೊಡಬೇಕು ಎಂದು ವಿನಂತಿಸಿದರು.
ಚನ್ನರಾಜ ಹಟ್ಟಿಹೊಳಿ, ಅರಣ್ಯಾಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.