ಬೆಳಗಾವಿಯಲ್ಲಿ ಆಕ್ಸಿಜನ್ ಘಟಕ ಉದ್ಘಾಟಿಸಿದ ಸಂಸದೆ ಅಂಗಡಿ
ಬೆಳಗಾವಿ: ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಬಳಿ ಸ್ಥಾಪಿಸಲಾಗಿರುವ ಆಕ್ಸಿಜನ್ ಘಟಕವನ್ನು ಶನಿವಾರ ಸಂಸದೆ ಮಂಗಳಾ ಅಂಗಡಿ ಉದ್ಘಾಟಿಸಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ಬೆಳಗಾವಿ ಜಿಲ್ಲೆಯ ಜನರಿಗಾಗಿ ಆಕ್ಸಿಜನ್ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಬೆಳಗಾವಿಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ತ್ವರಿತ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಬೆಳಗಾವಿಯಲ್ಲಿ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದೇವೆ. ಮೂರನೇ ಅಲೆಗೆ ಎದುರಿಸಲು ಈ ಆಕ್ಸಿಜನ್ ಘಟಕ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಮ್ಸ್ ನ ಆಡಳಿತಾಧಿಕಾರಿ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಹಾಜರಿದ್ದರು.