ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರಿಂದ ಮಂಗಾವತಿ ಶಹಾಪುರ ಗ್ರಾಮಕ್ಕೆ ಬೇಟಿ
ಬೆಳಗಾವಿ:ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಗ್ರಾಮಗಳಾದ ಮಂಗಾವತಿ ಮತ್ತು ಶಹಾಪುರ ಗ್ರಾಮಗಳಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿದರು.ಇದೇ ವೇಳೆ ಗ್ರಾಮಸ್ಥರು ಸಂಸದರಿಗೆ ಸತ್ಕಾರ ಮಾಡಿ ಸನ್ಮಾನಿಸಿದರು,
ಇದೇ ವೇಳೆ ಪ್ರವಾಹ ಪರಿಸ್ಥಿತಿ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿಧಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ನದಿ ತೀರದ ಜನರು ಭಯಪಡಬೇಡಿ. ನಿಮ್ಮ ಸುರಕ್ಷತೆ ನಮ್ಮ ಜವಾಬ್ದಾರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.