ವೃಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಉಮೇಶ್ ಕತ್ತಿ
ಬೆಳಗಾವಿ: ಚಿಕ್ಕೋಡಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ವೃಕ್ಷಾಪರೋಹಣ ಕಾರ್ಯಕ್ರಮ ಹುಕ್ಕೇರಿ ಮತಕ್ಷೇತ್ರದ ಹರಗಾಪೂರ ಗ್ರಾಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಉಮೇಶ ಕತ್ತಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯಿ, ರಾಜ್ಯ ಉಪಾಧ್ಯಕ್ಷರಾದ ರಾಜಕುಮಾರ ಸಗಾಯಿ, ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ, ರಾಜ್ಯ ಕಾರ್ಯಕಾರಣಿ ಸದಸ್ಯ ಶ್ರೇಯಸ್ ನಾಕಾಡಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ದೀಪಕ್ ಪಾಟೀಲ್, ಜಿಲ್ಲಾ ಅಧ್ಯಕ್ಷರಾದ ಡಾ.ರಾಜೇಶ ನೆರ್ಲಿ, ಹರಗಾಪೂರ್ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀ ಪವನ್ ಪಾಟೀಲ ಭಾಗಿಯಾಗಿದ್ದರು