Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಮಹತ್ಮಾ ಗಾಂಧಿ ಜಲವಿದ್ಯುತ್ ಕೇಂದ್ರದ ವಿಶೇಷತೆ ಏನು ಅಂತೀರಾ! ಈ ಸ್ಟೋರಿ ನೋಡಿ

localview news

ಶಿವಮೊಗ್ಗ:ಈ ಯೋಜನೆ ಜೋಗ ಜಲಪಾತದ ಬಳಿ ಇರುವ ವಿದ್ಯುತ್ ಸ್ಥಾವರ. ಸ್ವಾತಂತ್ರಪೂರ್ವದಲ್ಲಿ ಸರ್. ಎಂ. ವಿಶ್ವೇಶ್ವರಯ್ಯನವರು ಮೊದಲ ಬಾರಿ ಜೋಗಕ್ಕೆ ಭೇಟಿಯಿತ್ತಾಗ ಜೋಗ ಜಲಪಾತವನ್ನು ನೋಡಿ ಎಂತಹ ವ್ಯರ್ಥ ಎಂದು ಉದ್ಗರಿಸಿದರಂತೆ. ಅವರ ಈ ಮಾತಿನ ಫಲಶ್ರುತಿ ಈ ಜಲವಿದ್ಯುತ್ ಆಗರ.

1930ರ ದಶಕದ ಪೂರ್ವಭಾಗದಲ್ಲಿ ಮೈಸೂರು ಲೋಕೋಪಯೋಗಿ ಇಲಾಖೆಯಿಂದ ಜಲ ವಿದ್ಯುತ್ ಯೋಜನಾ ಕಾರ್ಯ ಶುರುವಾಯಿತು. ಮೊದಲ ಹಂತದ ಕೆಲಸ 1939ರಲ್ಲಿ ಜೋಗ ಜಲಪಾತದಿಂದ 24 ಕಿ.ಮೀ. ದೂರದಲ್ಲಿರುವ ಹಿರೆಭಾಸ್ಕರ ಎಂಬ ಸ್ಥಳದಲ್ಲಿ ಶುರುವಾಯಿತು. ಮೊದಲು ಕೃಷ್ಣರಾಜೇಂದ್ರ ಜಲವಿದ್ಯುತ್ ಯೋಜನೆಯೆಂದು ಕರೆಯಲ್ಪಡುತ್ತಿದ್ದ ಈ ಯೋಜನೆಯನ್ನು ನಂತರ ಮಹಾತ್ಮ ಗಾಂಧಿ ಜಲ ವಿದ್ಯುತ್ ಯೋಜನೆಯೆಂದು ನಾಮಕರಣ ಮಾಡಲಾಯಿತು.

ಫೆಬ್ರವರಿ 21, 1949ರಲ್ಲಿ ಉದ್ಘಾಟನೆ ಯಾದ ಈ ವಿದ್ಯುತ್ ಸ್ಥಾವರ 120 ಮೆಗಾವ್ಯಾಟ್ ವಿದ್ಯುಚ್ಛಕ್ತಿ ಉತ್ಪಾದಿಸುವ ಕ್ಷಮತೆಯನ್ನು ಹೊಂದಿದೆ. ಮೊದಲು ಹಿರೆಭಾಸ್ಕರ ಜಲಾಶಯದಿಂದ ಈ ಯೋಜನೆಗೆ ನೀರಿನ ಸರಬರಾಜಾಗುತ್ತಿತ್ತು, 60ರ ದಶಕದಲ್ಲಿ ಲಿಂಗನಮಕ್ಕಿ ಜಲಾಶಯ ಪ್ರಾರಂಭವಾದ ನಂತರ ಅದೇ ಈ ಯೋಜನೆಗೆ ನೀರಿನ ಮೂಲ,