ಪಾಲಿಕೆ ಎದುರಿನ ಕನ್ನಡ ಬಾವುಟ ಬದಲಾವಣೆ ಮಾಡಬೇಕು: ಹೊರಟ್ಟಿ
ಬೆಳಗಾವಿ:ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಬೇಕೆಂದು 15 ದಿನದ ಹಿಂದೆಯೇ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದೇನೆ ಅವರು ಸಚಿವ ಸಂಪುಟದ ಸಭೆಯಲ್ಲಿ ತಿರ್ಮಾನ ಕೈಕೊಳ್ಳಲಾಗವುದು ಎಂದು ಹೇಳಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಾನು 15 ದಿನದ ಹಿಂದೆಯೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಪತ್ರ ಬರೆದಿದ್ದೇನೆ. ಕಳೆದ ಡಿಸೆಂಬರ್ 10 ರಂದು ನಡೆದ ಅಧಿವೇಶನ ನಡೆಸಿದ್ದು, ಮತ್ತೆ ನಡೆದಿಲ್ಲ. ಆದ್ದರಿಂದ ನಾನು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಅವರು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವುದಾಗಿ ಹೇಳಿದ್ದರು.
ಉತ್ತರ ಕರ್ನಾಟಕದ ಜನರ ಸಮಸ್ಯೆ ಕೋವಿಡ್ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಸರಕಾರ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದವಾಗಿದ್ದೇವೆ. ಅಲ್ಲದೆ ಬೆಳಗಾವಿಯಲ್ಲಿಯೇ ಅಧಿವೇಶನ ನಡೆಸವುದು ಸೂಕ್ತ ಎಂದ ಅವರು, ಸಚಿವ ಸಂಪುಟದಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದರಾಗಿರಬೇಕು. ಅದುವೇ ಅಂತಿಮ ಎಂದು ಸ್ಪಷ್ಟಪಡಿಸಿದರು.