ರಕ್ಕಸ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು
ಬೆಳಗಾವಿ :ವರುಣನ ಅರ್ಭಟಕ್ಕೆ ಕುಂದಾನಗರಿಯ ಜನತೆ ಬೆಚ್ಚಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ನಲುಗಿ ಹೋಗಿರುವ ಜಿಲ್ಲೆಯ ಜನರು, ಮಹಾರಾಷ್ಟ್ರ ಸೇರಿದಂತೆ ಅಚ್ಚುಕಟ್ಟು ಪ್ರದೇಶಗಳಲ್ಲಿ ಧಾರಾಕಾರವಾಗಿ ಬಿಳುತ್ತಿರುವ ಮಳೆಯಿಂದ
ಬೆಳಗಾವಿಯ ಕೃಷ್ಣಾ, ಧೂದಗಂಗಾ, ವೇಧಗಂಗಾ, ಹಿರಣ್ಯಕೇಶಿ, ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ. ಕೃಷ್ಣಾ ನದಿಗೆ 70 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹೆಚ್ಚಾಗಿದ್ದ ನದಿ ದಡದಲ್ಲಿರುವ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ಇತ್ತ ನಗರದ ಹೊರವಯದಲ್ಲಿರುವ ಕಾಕತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳಿಗೆ ದಾರಿ ಇಲ್ಲದೆ ಸಾಲುಗಟ್ಟಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.