ನಾಳೆ ಬೆಳಗಾವಿಗೆ ಆಗಮಿಸಲಿರುವ ರಾಜಾಹುಲಿ
ಬೆಳಗಾವಿ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಾನುವಾರ ಬೆಳಗಾವಿಗೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಯಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬೆಂಗಳೂರಿನಿಂದ ನೇರವಾಗಿ ಬೆಳಗಾವಿಗೆ ಆಗಮಿಸಲಿರುವ ಅವರು, ಚಿಕ್ಕೋಡಿ, ರಾಯಬಾಗ, ಗೋಕಾಕ, ಸವದತ್ತಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ನಂತರ ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಕೆಲವು ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಇರಲಿದ್ದಾರೆ.