Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಜಲಾಶಯಗಳು

localview news

ಬೆಳಗಾವಿ:ಪಶ್ಷಿಮ ಘಟದಲ್ಲಿ ಭಾರಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ನವಿಲುತೀರ್ಥ (ಮಲಪ್ರಭಾ) ಅಣೆಕಟ್ಟೆಯಿಂದ ಸುಮಾರು 2000 ಕ್ಯೂಸೆಕ್ಸ್ ನಷ್ಟು ನೀರನ್ನು ಹೊರ ಬಿಡುತ್ತಿದ್ದಾರೆ. ಸಾಯಂಕಾಲದ ಹೊತ್ತಿಗೆ 5000 ಕ್ಯೂಸೆಕ್ಸ್ ನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಸುರಕ್ಷತೆಯ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.

ನೆರೆಯ ಮಹಾರಾಷ್ಟ್ರದ ಘಟಪ್ರದೇಶಗಳಲ್ಲಿ ಹಾಗೂ ಬೆಳಗಾವಿಯ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಶನಿವಾರವೂ ಕೂಡ ಜಿಲ್ಲೆಯಲ್ಲಿ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಜನಜೀವನ ಅಸ್ತವ್ಯವಸ್ತವಾಗಿದೆ. ಜಿಲ್ಲೆಯ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಕೃಷ್ಣಾ ನದಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗುತ್ತಿದೆ. ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ಬೆಳಗಾವಿ ತಾಲೂಕಿನ ವಂಟಮೂರಿ ಘಾಟ ಬಳಿ ರಾಷ್ಟ್ರೀಯ ಹೆದ್ದಾರಿ ಭಾರಿ ಪ್ರಮಾಣದ ನೀರು ತುಂಬಿಕೊಂಡು ನಗರ ಪ್ರದೇಶಗಳಲ್ಲಿ ಹರಿದು ಬರುತ್ತಿವೆ. ಬೆಳಗಾವಿ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕ ಮಹಾರಾಷ್ಡ್ರದ ಗಡಿಯಲ್ಲಿ ವೇದಗಂಗಾ ನದಿಯು ಅಪಾಯಕಾರಿ ಸ್ವರೂಪ ತಾಳಿದ್ದು,ವೇದಗಂಗಾ ನದಿಯ ನೀರು ಪೂನಾ-ಬೆಂಗಳೂರು ,ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಬೆಳಗಾವಿಯ ನಿಪ್ಪಾಣಿ ಬಳಿಯ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡ ಹಿನ್ನಲೆಯಲ್ಲಿ ಪೂನಾ- ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಂಡಿದೆ.

ಜಲಾವೃತಗೊಂಡ ರಾಷ್ಟ್ರೀಯ ಹೆದ್ದಾರಿಯ 2 ಕಿ ಮೀ ಮೊದಲೇ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಧಾರವಾಡ,ಹಿರೇಬಾಗೇವಾಡಿ,ಮತ್ತು ಹತ್ತರಕಿಯ ಟೋಲ್ ನಾಕಾದಿಂದ ಮಹಾರಾಷ್ಟ್ರಕ್ಕೆ ಹೋಗುವ ವಾಹನಗಳನ್ನು ಪರ್ಯಾಯ ರಸ್ತೆಯ ಮೂಲಕ ಡೈವೋರ್ಟ್ ಮಾಡಲಾಗುತ್ತಿದೆ. ಬಹಳಷ್ಟು ವಾಹನಗಳು ರಾಷ್ಟ್ರೀಯ ಹೆದ್ದಾರಿ ಬಿಟ್ಟು ಪರ್ಯಾಯ ರಸ್ತೆಯ ಮೂಲಕ ಮಹಾರಾಷ್ಟ್ರಕ್ಕೆ ಹೋಗುತ್ತಿವೆ.

ಶಿವಾಜಿ ನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು ವಿಪರೀತ ಮಳೆಯಿಂದಾಗಿ ಬೆಳಗಾವಿಯ ಶಿವಾಜಿ ನಗರದ ಮನೆಗಳಿಗೆ ತಡರಾತ್ರಿ ನೀರು ನುಗ್ಗಿದ ಪರಿಣಾಮ, ಅಲ್ಲಿಯ ಜನ ಪರದಾಡಿದರು. ಪ್ರತಿ ವರ್ಷ ಮಳೆಗಾಲದಲ್ಲಿ ಇದೇ ರೀತಿಯ ಸಮಸ್ಯೆ ಎದುರಾಗುತ್ತಿದ್ದು ಅದಕ್ಕೆ ಶಾಶ್ವತ ಪರಿಹಾರ ಹುಡುಕಲು ಇಲ್ಲಿಯ ಜನ ಒತ್ತಾಯಿಸಿದ್ದಾರೆ.