Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ: ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

localview news

ಬೆಳಗಾವಿ: 2021ನೇ ಸಾಲಿನ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ವೈಯಕ್ತಿಕ ಹಾಗೂ ಸಂಸ್ಥೆಯ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕ್ಷೇತಗಳಲ್ಲಿ ( ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ, ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ (60 ವರ್ಷ ಮೇಲ್ಪಟ್ಟ ) ಹಿರಿಯ ನಾಗರಿಕರು ಹಾಗೂ ಸ್ವಯಂ-ಸಂಸ್ಥೆಯವರು ನಿಗಧಿತ ಅರ್ಜಿ ನಮೂನೆಯಲ್ಲಿ ಪೂರ್ಣ ವಿವರಗಳನ್ನೊಳಗೊಂಡ ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ದಿನಾಂಕ 21-08-2021 ರ ಒಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬೆಳಗಾವಿ ಇಲ್ಲಿ ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ವೆಬ್‍ಸೈಟ್ ವಿಳಾಸ : www.dwdsc.Kar.nic.in ಅಥವಾ ಕಛೇರಿ ದೂರವಾಣಿ ಸಂಖ್ಯೆ: 0831-2476096 ಗೆ ಅಥವಾ ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲ್ಯೂ. ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.