Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಾಯ

localview news

ಬೆಳಗಾವಿ:ಬೆಸ್ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ ಡಿಪ್ಲೊಮಾ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಶುಕ್ರವಾರ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಬಿಟ್ಟು, ಪ್ರಸಕ್ತ ಸೆಮಿಸ್ಟರ್ ನ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಿ, ಸಿಬಿಎಸ್ ಸಿ, ಐಸಿಎಸ್ಇ ಮತ್ತು ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಿದಂತೆ ಡಿಪ್ಲೊಮಾ ವಿದ್ಯಾರ್ಥಿಗಳ ಆಡ್ ಸೆಮಿಸ್ಟರ್ ಪರೀಕ್ಷೆಯನ್ನು ಪರೀಕ್ಷೆಯನ್ನು ರದ್ದುಗೊಳಿಸಿ, ಆಂತರಿಕ ಮೌಲ್ಯ ಮಾಪನ ಅಥವಾ ಇನ್ನಾವುದಾದರು ವೈಜ್ಞಾನಿಕ ಮಾನದಂಡದ ಮೂಲಕ ಮೌಲ್ಯ ಮಾಪನ ಮಾಡಬೇಕೆಂದು ಆಗ್ರಹಿಸಿದರು.

ಶಿಕ್ಷಣ ತಜ್ಞರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳೊಡನೆ ಪ್ರಜಾತಾಂತ್ರಿಕ ಚರ್ಚೆಗಳನ್ನು ನಡೆಸಿ, ಶೈಕ್ಷಣಿಕ ವೇಳಾಪಟ್ಟಿ, ಪರೀಕ್ಷೆ, ಮೌಲ್ಯಮಾಪನ ಇವುಗಳ ಬಗ್ಗೆ ಒಂದು ವೈಜ್ಞಾನಿಕ, ಪ್ರಜಾತಾಂತ್ರಿಕ ನೀತಿಯನ್ನು ರೂಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಕೊರೊನಾ ಲಸಿಕೆ ನೀಡುವ ವರೆಗೆ ಆನ್ ಲೈನ್ ತರಗತಿಯನ್ನು ಆರಂಭಿಸಬಾರದು. ಯುಜಿಸಿ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಇಲ್ಲದಿದ್ದರೇ ಉಗ್ರಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ವರಿಸಿದರು‌.
ರಾಜು ಬೆಳಗಾವಿ, ಅಜಯ ಕಾಮತ, ಅಪೂರ್ವ, ಅಶ್ವಿನಿ ಕೆ.ಎಸ್.ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.