Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹೊಸ ವಂಟಮುರಿ, ಮಲಹೋಳಿಯಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

localview news

ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮುರಿ ಮತ್ತು ಮಲಹೋಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.

ರಾಹುಲ್ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆಗಳ ವೀಕ್ಷಣೆ ಮಾಡಿದರು.

ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ರಾಹುಲ್ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದು ಸುಣಗಾರ, ರಾಮಣ್ಣ ಗುಳ್ಳಿ, ಸುರೇಶ ನಾಯ್ಕ, ಈರಪ್ಪ ಪಾಟೀಲ್, ಗ್ರಾಪಂ ಸದ್ಯಸರು ಹಾಗೂ ಗ್ರಾಮಸ್ಥರು ಇದ್ದರು.