Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಧನಸಹಾಯ ಒದಗಿಸಿದ ಪ್ರಿಯಾಂಕಾ ಜಾರಕಿಹೊಳಿ

localview news

ಗೋಕಾಕ: ನೇಪಾಳದಲ್ಲಿ ಅಗಸ್ಟ್ 10 ರಂದು ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪ ಹಂಜಿ ಹಾಗೂ ತಪಸಿ ಗ್ರಾಮದ ಮಲ್ಲಪ್ಪ ನಾಯಕ ಎಂಬ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ ಸಹಾಯ ಒದಗಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಂಗಳವಾರ ಪ್ರಿಯಾಂಕಾ ಜಾರಕಿಹೊಳಿ ಅವರು ಇಬ್ಬರು ಕ್ರೀಡಾಪಟುಗಳಿಗೆ ಸಹಾಯಧನ ವಿತರಣೆ ಮಾಡಿ, ಪ್ರೋತ್ಸಾಹಿಸಿದರು. ಪಂದ್ಯಾವಳಿಯಲ್ಲಿ ಗೆದ್ದು ಬರುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ರಂಗಸುಬೆ, ಸುರೇಶ್, ರಾಯಪ್ಪ ಹಂಜಿ, ಮಹಾದೇವಪ್ಪ ಪತ್ತಕಿ ಹಾಗೂ ಮೆಳವಂಕಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.