Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ದೇಶದ 9.75 ಕೋಟಿ ರೈತರ ಖಾತೆಗೆ ಜಮಾ ಆಯ್ತು ಪಿಎಂ ಕಿಸಾನ್ ಸನ್ಮಾನ್ ನಿಧಿ

localview news

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿಯ 9 ನೆ ಕಂತಿನ ಹಣ ಇಂದು ನೇರ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ದೇಶದ 9.75 ಕೋಟಿ ರೈತರಿಗೆ 19.5 ಸಾವಿರ ಕೋಟಿ ರೂಪಾಯಿಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಸಭೆಯ ಮೂಲಕ ಹಣ ಪಾವತಿಗೆ ಚಾಲನೆ ನೀಡಿದರು.

ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಗಳನ್ನು ಪಾವತಿಸುವ ಈ ಯೋಜನೆಯನ್ನು 2019ರ ಫೆಬ್ರವರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದರು.

ಅದರಂತೆ ಇಂದು 9ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದಾರೆ. ಈವರೆಗೂ ಒಂಬತ್ತು ಕಂತುಗಳಲ್ಲಿ 11 ಕೋಟಿ ರೈತರಿಗೆ 1.37 ಲಕ್ಷ ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

ರೈತರು ಕೋವಿಡ್ ಸಂಕಷ್ಟ ಸಮಯದಲ್ಲೂ ಕೂಡ ಕಷ್ಟ ಪಟ್ಟು ಕೆಲಸ ಮಾಡಿದ್ದಾರೆ. ಹಾಗಾಗಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಯೊಜನೆಯ ನಿರೀಕ್ಷೆ ಇದೆ. ದೇಶದಲ್ಲಿ ಅಡುಗೆ ಎಣ್ಣೆ ಮತ್ತು ದ್ವಿದಳ ಧಾನ್ಯಗಳ ಕೊರತೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಅದರ ಕುರಿತಂತೆ ಗಮನ ಹರಿಸಿ ಹೆಚ್ಚಿನ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ರಾಜ್ಯ ಸಚಿವರಾದ ಕೈಲಾಶ್ ಚೌದರಿ, ಶೋಭಾ ಕರಂದ್ಲಾಜೆ, ಕೃಷಿ ಇಲಾಖೆ ಕಾರ್ಯದರ್ಶಿ ಸಂಜಯ್ ಅಗರ್‍ವಾಲ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.