Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಯುವ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಅನುಮೋದನೆ: ಡಿಸಿ ಹಿರೇಮಠ

localview news

ಬೆಳಗಾವಿ:ದೇಶದಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿರುವುದರಿಂದ ನೆಹರೂ ಯುವ ಕೇಂದ್ರದ ಎಲ್ಲ ಕಾರ್ಯಕ್ರಮಗಳಲ್ಲೂ ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರೂ ಯುವ ಕೇಂದ್ರದ ವತಿಯಿಂದ ಕೂಡ ಆಜಾದಿ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದಲ್ಲದೇ ಜಿಲ್ಲಾಡಳಿತ ವತಿಯಿಂದ ವರ್ಷವಿಡೀ ನಡೆಸಲಾಗುವ ಕಾರ್ಯಕ್ರಮಗಳ ಜತೆ ಕೈ ಜೋಡಿಸಬೇಕು ಎಂದು ತಿಳಿಸಿದರು.

ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯ ಅನ್ವಯ ಹಮ್ಮಿಕೊಳ್ಳಲಾಗಿರುವ ಎಲ್ಲ ಕಾರ್ಯಕ್ರಮಗಳ ಕುರಿತು ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯಲ್ಲಿ ಹಿರೇಮಠ ನಿರ್ದೇಶನ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ನೆಹರೂ ಯುವ ಕೇಂದ್ರದ ಅಧಿಕಾರಿ ರೋಹಿತ್ ಕಲ್ರಾ, ೨೦೨೧-೨೦೨೨ನೇ ಸಾಲಿನ ಕ್ರಿಯಾ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು. ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಗಳಲ್ಲೂ ಕೂಡ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಯುವಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗಿರುವ ವಿವಿಧ ಬಗೆಯ ಕಾರ್ಯಕ್ರಮಗಳು, ರಾಷ್ಟ್ರೀಯ ದಿನಾಚರಣೆಗಳು, ಯುವ ಕ್ಲಬ್ ಚಟುವಟಿಕೆಗಳು, ಯುವ ಪ್ರಶಸ್ತಿಗಳ ಪ್ರದಾನ, ಶಿಬಿರಗಳು, ಜಾಗೃತಿ ಕಾರ್ಯಕ್ರಮ ಸೇರಿದಂತೆ ಎಲ್ಲ ಕಾರ್ಯಕ್ರಮಗಳು ಹಾಗೂ ಅವುಗಳಿಗೆ ಮೀಸಲಿಟ್ಟಿರುವ ಅನುದಾನದ ಬಗ್ಗೆ ಕೇಂದ್ರದ ಲೆಕ್ಕಾಧಿಕಾರಿ ಸಭೆಯಲ್ಲಿ ವಿವರಿಸಿದರು.

ಒಟ್ಟು ೧೦.೨೯ ಲಕ್ಷ ವೆಚ್ಚದಲ್ಲಿ ಇಡೀ ವರ್ಷದಲ್ಲಿ ಒಟ್ಟಾರೆ ೮೦ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮಹಿಳಾ ಕಲ್ಯಾಣ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಕರಗುಪ್ಪಿ ಸಮುದಾಯ ಬಾನುಲಿ ಕೇಂದ್ರ ಕೂಡ ನೆಹರೂ ಯುವ ಕೇಂದ್ರದ ಸಹಭಾಗಿತ್ವದಲ್ಲಿ ವಿವಿಧ ಬಗೆಯ ಕಾರ್ಯಕ್ರಮಗನ್ನು ಹಮ್ಮಿಕೊಳ್ಳಲು ಸಿದ್ಧವಿರುವುದಾಗಿ ಬಾನುಲಿ ಕೇಂದ್ರದ ಸುರೇಖಾ ಪಾಟೀಲ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಬಸವಪ್ರಭು ಹಿರೇಮಠ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.